ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ 19: ಸೆಪ್ಟೆಂಬರ್ 04 ರಂದು ಜಾಗತಿಕವಾಗಿ ಎಷ್ಟು ಮಂದಿ ಚೇತರಿಕೆ

|
Google Oneindia Kannada News

ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 220,695,901 ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 197,204,023 ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 201,772,612 ಪ್ರಕರಣಗಳು ಮುಕ್ತಾಯಗೊಂಡಿವೆ.

ಕೊರೋನಾ ಮೂರನೇ ಅಲೆ ಭೀತಿ ನಡುವೆಯೇ ಶನಿವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 42,618 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 330 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಶನಿವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,29,45,907ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,40,225ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,05,681ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 36,385 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,21,00,001ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,04,970 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, 52,82,40,038 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ 1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 58.85 ಲಕ್ಷ ಡೋಸ್‌ ಲಸಿಕೆ ನೀಡುವುದರೊಂದಿಗೆ ಇದುವರೆಗೆ ಲಸಿಕೆ ವಿತರಣೆ ಪ್ರಮಾಣ 67.72 ಕೋಟಿ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.

ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 18 ರಿಂದ 44 ವರ್ಷದೊಳಗಿನ 8.89 ಕೋಟಿ ಮಂದಿ ಮೊದಲ ಡೋಸ್ ಲಸಿಕೆ ಪಡೆದಿದ್ದರೆ, 4.62 ಕೋಟಿ ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆಂದು ತಿಳಿಸಿದೆ.

ಈ ನಡುವೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 42,618 ಹೊಸ ಕೇಸ್ ಪತ್ತೆಯಾಗಿದ್ದು 330 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಸೆಪ್ಟೆಂಬರ್ 04 ರಂತೆ) ಇಲ್ಲಿದೆ.

ಕೊವಿಡ್19 ಪ್ರಕರಣಗಳು

ಕೊವಿಡ್19 ಪ್ರಕರಣಗಳು

ಆಗಸ್ಟ್ 28ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ220,695,901 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 4,568,589 ಕ್ಕೇರಿದೆ. ಒಟ್ಟಾರೆ, 197,204,023 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 18,923,289 ಸಕ್ರಿಯ ಪಾಸಿಟಿವ್ 105,925 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 201,772,612 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾ ಬಾಧಿತ ಟಾಪ್ 10 ದೇಶಗಳು

ಕೊರೊನಾ ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 40,703,674 ಪ್ರಕರಣಗಳು
ಭಾರತ: 32,945,907
ಬ್ರೆಜಿಲ್: 20,856,060
ರಷ್ಯಾ: 6,993,954
ಫ್ರಾನ್ಸ್: 6,812,706
ಯುಕೆ:6,904,969
ಟರ್ಕಿ: 6,458,630
ಅರ್ಜೆಂಟೀನಾ: 5,199,919
ಕೊಲಂಬಿಯಾ: 4,901,163
ಇಟಲಿ: 4,559,970

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಕೊರೊನಾವೈರಸ್ ನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು

ಯುಎಸ್ಎ: ಮೃತರ ಸಂಖ್ಯೆ 664,935
ಬ್ರೆಜಿಲ್:582,753
ಭಾರತ: 440,256
ಮೆಕ್ಸಿಕೋ: 262,221
ರಷ್ಯಾ: 186,407
ಯುಕೆ:133,041
ಇಟಲಿ: 129,410
ಫ್ರಾನ್ಸ್:114,773
ಅರ್ಜೆಂಟೀನಾ: 112,356
ಜರ್ಮನಿ: 92,829

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಕೊರೊನಾವೈರಸ್ ನಿಂದ ಅತಿ ಹೆಚ್ಚು ಗುಣಮುಖರಾದವರು ಟಾಪ್ 10 ದೇಶ:

ಭಾರತ: ಗುಣಮುಖರಾದವರ ಸಂಖ್ಯೆ: 32,100,001
ಯುಎಸ್ಎ:31,265,847
ಬ್ರೆಜಿಲ್: 19,820,202
ಫ್ರಾನ್ಸ್: 6,335,090
ಟರ್ಕಿ: 5,886,912
ರಷ್ಯಾ:6,255,475
ಯುಕೆ:5,561,928
ಇಟಲಿ: 4,293,535
ಕೊಲಂಬಿಯಾ: 4,744,394
ಅರ್ಜೆಂಟೀನಾ: 4,891,152 (ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
The world is seeing a surge in the number of coronavirus cases. As on September 04 the total cases are at 220,695,901 with death is 4,568,589. The total number of recoveries is 197,204,023.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X