ಕೊವಿಡ್ 19: ಮೇ 02ರಂದು ವಿಶ್ವದಲ್ಲಿ ಎಷ್ಟು ಮಂದಿ ಚೇತರಿಕೆ?
ಬೆಂಗಳೂರು, ಮೇ 02: ಕೊವಿಡ್19 ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖ ಹೊಂದಿದವರ ಅಂಕಿ ಅಂಶ ವಿವರ ಇಲ್ಲಿದೆ. ವಿಶ್ವದೆಲ್ಲೆಡೆ ಒಟ್ಟು 152,995,299ಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು 130,295,896ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 133,505,182ಪ್ರಕರಣಗಳು ಮುಕ್ತಾಯಗೊಂಡಿವೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 392,562ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಒಟ್ಟಾರೆ ಸಂಖ್ಯೆಯು 19,614,661ಕ್ಕೇರಿದೆ. ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 216,003ಕ್ಕೆ ಏರಿಕೆಯಾಗಿದೆ, 16,046,195ಮಂದಿ ಚೇತರಿಕೆ ಹೊಂದಿದ್ದಾರೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.
ಮೇ 02 ರಂದು ಈ ಸಮಯಕ್ಕೆ ವಿಶ್ವದೆಲ್ಲೆಡೆ 152,995,299 ಕೊವಿಡ್ 19 ಪ್ರಕರಣಗಳಿವೆ ಹಾಗೂ ಸಾವಿನ ಸಂಖ್ಯೆ 3,209,286ಕ್ಕೇರಿದೆ. ಒಟ್ಟಾರೆ, 130,295,896ಮಂದಿ ಗುಣಮುಖರಾಗಿದ್ದಾರೆ. ಒಟ್ಟು 19,490,117ಸಕ್ರಿಯ ಪಾಸಿಟಿವ್ 111,943 ವಿಷಮ ಪರಿಸ್ಥಿತಿಯಲ್ಲಿರುವ ಸೋಂಕಿತರಿದ್ದಾರೆ. 133,505,182 ಪ್ರಕರಣಗಳು ಮುಕ್ತಾಯಗೊಂಡಿವೆ. ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳಲ್ಲಿ ಅತಿ ಹೆಚ್ಚು ಚೇತರಿಕೆಗೊಂಡವರು ಕೂಡಾ ಇದ್ದಾರೆ.

ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್ 10 ದೇಶಗಳ ವಿವರ (ಮೇ 02 ರಂತೆ) ಇಲ್ಲಿದೆ...ವಿನ್ಯಾಸ: ಭರತ್ ಎಚ್. ಸಿ.












Click it and Unblock the Notifications