ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ: ಚಿತ್ರ ವಿವರ
ಬೆಂಗಳೂರು, ಏಪ್ರಿಲ್ 10: ಇನ್ನು ಕೆಲವೇ ದಿಗಳಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಏ.8 ರಂದು ಬಿಡುಗಡೆಯಾಗಿದೆ.
ಬಿಜೆಪಿ ಮೂರು ಸುತ್ತಿನ ಸಮೀಕ್ಷೆ ನಂತರ 72 ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ. ಈಗಾಗಲೇ ಜೆಡಿಎಸ್ ಪಕ್ಷ 126 ಅಭ್ಯರ್ಥಿಗಳ ಅಧಿಕೃತ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಾಂಗ್ರೆಸ್ ಇನ್ನೂ ತನ್ನ ಪಟ್ಟಿ ಪ್ರಕಟಿಸಿಲ್ಲ. ಕರ್ನಾಟಕ ಚುನಾವಣಾ ಉಸ್ತುವಾರಿ ಜೆ.ಪಿ ನಡ್ಡಾ ಅವರು ಸುದ್ದಿಗೋಷ್ಠಿ ನಡೆಸಿ, ಅಧಿಕೃತವಾಗಿ ಪಟ್ಟಿ ಪ್ರಕಟಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕರ್ನಾಟಕ ವಿಧಾನಸಭೆ ಚುನಾವಣೆ ಮೇ 12 ರಂದು ನಡೆಯಲಿದ್ದು, ಮೇ 15 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಇನ್ನುಳಿದ ಅಭ್ಯರ್ಥಿಗಳ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ.















Click it and Unblock the Notifications