ಆಗಸ್ಟ್‌ 21ರಂದು ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಲ್ಲೆಲ್ಲಿ ಎಷ್ಟಿದೆ?

ಬೆಂಗಳೂರು, ಆಗಸ್ಟ್‌ 21: ದೇಶದಲ್ಲಿ ಸತತ 35ನೇ ದಿನವಾದ ಶನಿವಾರ, ಆಗಸ್ಟ್‌ 21ರಂದು ಪೆಟ್ರೋಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಘೋಷಿಸಿವೆ. ಎರಡು ದಿನಗಳಿಂದ ಇಳಿಕೆ ಕಂಡಿದ್ದ ಡೀಸೆಲ್ ಬೆಲೆಯೂ ಇಂದು ಸ್ಥಿರವಾಗಿರುವುದಾಗಿ ಮಾಹಿತಿ ನೀಡಿದೆ.

ಪ್ರಸ್ತುತ ಶನಿವಾರ ದೇಶದ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 101.84 ರೂ ಇದ್ದರೆ, ಡೀಸೆಲ್ ದರ 89.27 ರೂ ಆಗಿದೆ. ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಲೀಟರ್‌ಗೆ 105.25 ಇದ್ದರೆ, ಡೀಸೆಲ್ ಬೆಲೆ 94.65 ರೂ ಆಗಿದೆ.

ದೇಶಾದ್ಯಂತ ಜುಲೈ 17ರಂದು ಕೊನೆಯ ಬಾರಿಗೆ ಪೆಟ್ರೋಲ್ ದರವನ್ನು ಪರಿಷ್ಕರಣೆ ಮಾಡಿ ಬೆಲೆ ಏರಿಕೆ ಮಾಡಲಾಗಿತ್ತು. ಅದಾದ ನಂತರ ಬೆಲೆ ಪರಿಷ್ಕರಣೆ ಮಾಡಲಾಗಿಲ್ಲ. ಡೀಸೆಲ್ ಬೆಲೆಯಲ್ಲಿ ಮಾತ್ರ ಕೊಂಚ ಇಳಿಕೆ ಮಾಡಿದ್ದು, ಆಗಸ್ಟ್‌ 18ರಿಂದ ಡೀಸಲ್‌ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಪೆಟ್ರೋಲ್‌ ಬೆಲೆ ಸ್ಥಿರವಾಗಿ ಉಳಿದುಕೊಂಡಿದೆ.

Infographics: Fuel Prices Across Karnataka On August 21

ಮುಂಬೈನಲ್ಲಿ ಅತ್ಯಧಿಕ ದರ
ಮೆಟ್ರೋ ನಗರಗಳ ಪೈಕಿ ಮುಂಬೈನಲ್ಲಿ ಅತ್ಯಧಿಕ ಪೆಟ್ರೋಲ್ 107.83 ರೂ ಪ್ರತಿ ಲೀಟರ್, ಡೀಸೆಲ್ 97.04 ರೂ ಪ್ರತಿ ಲೀಟರ್‌ನಷ್ಟಿದೆ ಎಂದು ಇಂಡಿಯನ್ ಆಯಿಲ್ ಸಂಸ್ಥೆ ಪ್ರಕಟಿಸಿದೆ.

ಭಾರತ ಸರ್ಕಾರದ ಅಬಕಾರಿ ಸುಂಕ
ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98 ರೂ ಹಾಗೂ ಡೀಸೆಲ್ ಮೇಲೆ 31.80 ರೂ ನಷ್ಟಿದೆ.

ಪೆಟ್ರೋಲ್ ಪ್ರತಿ ಲೀಟರ್‌ಗೆ 106 ರೂ ದಾಟಿದ ಜಿಲ್ಲೆಗಳು

ಕಳೆದ 33 ದಿನಗಳಿಂದ ಕರ್ನಾಟಕದ ಪ್ರಮುಖ ಪಟ್ಟಣಗಳಲ್ಲಿ ಪೆಟ್ರೋಲ್ ದರ ಸತತವಾಗಿ 100 ರೂ ಗಡಿ ದಾಟಿದೆ. ಪೆಟ್ರೋಲ್ 104 ರೂ ಕನಿಷ್ಠ ,107 ರೂ ಗರಿಷ್ಠ ದಾಖಲಾಗಿದೆ.
ಬೆಂಗಳೂರಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 105.25 ರೂಪಾಯಿಗೆ ತಲುಪಿದೆ. ಡೀಸೆಲ್ ದರ ಪ್ರತಿ ಲೀಟರ್‌ಗೆ 94.86 ರೂಪಾಯಿಗೆ ಮುಟ್ಟಿದೆ. ಬಳ್ಳಾರಿ ಜಿಲ್ಲೆಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ ಕ್ರಮವಾಗಿ 107.12 ರೂ ಇದೆ. ಚಿಕ್ಕಮಗಳೂರಿನಲ್ಲಿ 107.20 ರೂ ಇದೆ. ಚಿತ್ರದುರ್ಗ, ದಾವಣಗೆರೆ, ಕೊಡಗು, ಕೊಪ್ಪಳ, ಯಾದಗಿರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಲೆ 106ರೂ ಗೂ ಹೆಚ್ಚಿದೆ.

Infographics: Fuel Prices Across Karnataka On August 21

ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರೂಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯು ಕಚ್ಚಾ ತೈಲ ದರ ಇಳಿಕೆಗೆ ಪ್ರಮುಖ ಕಾರಣವಾಗಿದ್ದು, ಡಬ್ಲ್ಯುಟಿಐ ಕಚ್ಚಾತೈಲವು ಪ್ರತಿ ಬ್ಯಾರೆಲ್‌ಗೆ $ 63.52 ರಂತೆ 0.03% ರಷ್ಟು ಹೆಚ್ಚಾಗಿದೆ.

ರಾಜ್ಯದ ವಿವಿಧ ನಗರ, ಪಟ್ಟಣ, ಜಿಲ್ಲಾ ಕೇಂದ್ರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ (ಆಗಸ್ಟ್ 21) ಸಚಿತ್ರ ಮಾಹಿತಿ ಇಲ್ಲಿದೆ...

ಚಿತ್ರ ವಿನ್ಯಾಸ: ಭರತ್ ಎಚ್. ಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+