Infographics: ಅ.12ರಂದು ಪ್ರಮುಖ ನಗರಗಳಲ್ಲಿ 250 ರೂಪಾಯಿ ಇಳಿದ ಚಿನ್ನ
ನವದೆಹಲಿ, ಅಕ್ಟೋಬರ್ 12: ಭಾರತದಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಸತತ ಮೂರನೇ ದಿನವೂ ಇಳಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಇಳಿಕೆಯಾಗಿದ್ದು, 46,700 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 270 ರೂಪಾಯಿ ಇಳಿಕೆಯಾಗಿದ್ದು, 50,950 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲಿ 1000 ರೂಪಾಯಿ ಇಳಿಕೆ ಆಗಿದ್ದು, ಒಂದು ಕೆಜಿ ಬೆಳ್ಳಿಗೆ 63,000 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,700 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,950 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,650 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,890 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,800 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,050 ರೂ. ಇದೆ. ಚೆನ್ನೈನಲ್ಲಿ 47,300 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 51,600 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,650 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,890 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 46 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 12: 46,700 ರೂ, 50,950 ರೂ
ಅಕ್ಟೋಬರ್ 11: 46,950 ರೂ, 51,220 ರೂ
ಅಕ್ಟೋಬರ್ 10: 47,650 ರೂ, 51,980 ರೂ
ಅಕ್ಟೋಬರ್ 09: 47,900 ರೂ, 52,250 ರೂ
ಅಕ್ಟೋಬರ್ 08: 47,900 ರೂ, 52,250 ರೂ
ಅಕ್ಟೋಬರ್ 07: 47,900 ರೂ, 52,250 ರೂ
ಅಕ್ಟೋಬರ್ 06: 47,900 ರೂ, 52,250 ರೂ
ಅಕ್ಟೋಬರ್ 05: 47,800 ರೂ, 52,150 ರೂ

ಚಿನ್ನದ ಬೆಲೆ ನಿರ್ಧಾರ
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Commercial LPG: ಹೋಟೆಲ್, ಪಿಜಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್: ವಾಣಿಜ್ಯ ಎಲ್ಪಿಜಿ ಹಂಚಿಕೆ ಪ್ರಮಾಣ ಹೆಚ್ಚಿಸಿ ಆದೇಶ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ











Click it and Unblock the Notifications