Get Updates
Get notified of breaking news, exclusive insights, and must-see stories!

Infographics:ಮಾರ್ಚ್ 4 ರಂದು ಚಿನ್ನದ ದರ ಎಷ್ಟಿದೆ?

ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ.

ಮಾರ್ಚ್ 4 ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,700 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,040 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,700 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,040 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,700 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,040 ರೂ. ಇದೆ. ಚೆನ್ನೈನಲ್ಲಿ 48,830 ರೂ. ಹಾಗೂ ಅಪರಂಜಿ 53,270 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,700 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,040 ರು ಇದೆ.

ಎಂಸಿಎಕ್ಸ್‌ನಲ್ಲಿ ಮಾರ್ಚ್ 4ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 52067.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.60ರಷ್ಟು ಏರಿಕೆಯಾಗಿ 1,947.87 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.51ರಷ್ಟು ಏರಿಕೆಯಾಗಿ 25.27 ಯುಎಸ್ ಡಾಲರ್ ಆಗಿದೆ.

ಚಿನ್ನ ಬೆಳ್ಳಿ ದರ

ಚಿನ್ನ ಬೆಳ್ಳಿ ದರ

ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ.
ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಹೊಸ ರೂಪಾಂತರ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ

ಬೆಂಗಳೂರಿನಲ್ಲಿ ಚಿನ್ನದ ದರ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಬೆಂಗಳೂರು ಚಿನ್ನದ ಮೌಲ್ಯ ನಗರ: ಬೆಂಗಳೂರು 22 ಕ್ಯಾರೆಟ್ ಚಿನ್ನ 47,700 ರೂ (+400 ರೂ) 24 ಕ್ಯಾರೆಟ್ ಚಿನ್ನ 52,040 ರೂ (+440 ರೂ) ಬೆಳ್ಳಿ ದರ: 72,500 ರೂಪಾಯಿ (----) ನಗರ: ಮೈಸೂರು 22 ಕ್ಯಾರೆಟ್ ಚಿನ್ನ 47,700 ರೂ (+400 ರೂ) 24 ಕ್ಯಾರೆಟ್ ಚಿನ್ನ 52,040 ರೂ (+440 ರೂ) ಬೆಳ್ಳಿ ದರ: 72,500 ರೂಪಾಯಿ (----) ನಗರ: ಮಂಗಳೂರು 22 ಕ್ಯಾರೆಟ್ ಚಿನ್ನ 47,700 ರೂ (+400 ರೂ) 24 ಕ್ಯಾರೆಟ್ ಚಿನ್ನ 52,040 ರೂ (+440 ರೂ) ಬೆಳ್ಳಿ ದರ: 72,500 ರೂಪಾಯಿ

ಚಿನ್ನದ ಬೆಲೆ

ಚಿನ್ನದ ಬೆಲೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+