Infographics: ನ.06ರಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

ನವದೆಹಲಿ, ನವೆಂಬರ್ 06: ದೇಶದಲ್ಲಿ ಒಟ್ಟಾರೆ ಚಿನ್ನದ ಬೆಲೆ ಇಳಿಕೆ ಕಂಡಿದ್ದರೂ, ಕೆಲವು ನಗರಗಳಲ್ಲಿ ಏರಳಿತ ಇದೆ.

22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ. ಇಳಿಕೆಯಾಗಿ 46.210 ರೂ. ಆಗಿದೆ, ಇನ್ನು 24 ಕ್ಯಾರೆಟ್‌ನ ಅಪರಂಜಿ ಚಿನ್ನ 10 ಗ್ರಾಂಗೆ 47,210 ರೂ. ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 45,100 ಇದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 49,200 ಇದೆ.

ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,210 ರೂ. ಆಗಿದೆ, 24 ಕ್ಯಾರೆಟ್‌ನ ಹತ್ತು ಗ್ರಾಂ ಚಿನ್ನ 47,210 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,860ರೂ. ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 51,120 ರೂ. ಆಗಿದೆ.

Gold And Silver Rate Decreased In Indias Major Cities On November 06, 2021

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ದೇಶದಲ್ಲಿ ಬೆಳ್ಳಿ ಬೆಲೆ ಇಂದು ಒಂದು ಕೆಜಿಗೆ 64,400 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 64,400 ರೂ. ಇದೆ. ದೇಶಾದ್ಯಂತ ಕೆಲವು ನಗರಗಳನ್ನು ಹೊರತುಪಡಿಸಿ ಅನೇಕ ಕಡೆ ಬೆಳ್ಳಿ ಬೆಲೆಯಲ್ಲಿ ಏಕರೂಪವಿದೆ. ಚೆನ್ನೈ, ವಿಜಯವಾಡ, ಹೈದರಾಬಾದ್, ವಿಶಾಖಪಟ್ಟಣಂದಲ್ಲಿಯೂ 68,700 ರೂ ನಿಗದಿಯಾಗಿದೆ.

ದೈನಂದಿನ ಬೆಲೆ ಪ್ರಕ್ರಿಯೆಯಲ್ಲಿ ಇಂದು ಬೆಳಗಿನ ವೇಳೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ಗ್ರಾಂ (22 ಕ್ಯಾರಟ್‌) ಚಿನ್ನದ ಬೆಲೆಗೆ 45,100 ರೂಪಾಯಿ ನಿಗದಿಯಾಗಿದೆ. ಬೆಂಗಳೂರಿನಲ್ಲಿ 10 ಗ್ರಾಂ ಅಪರಂಜಿ ಚಿನ್ನದ (24 ಕ್ಯಾರಟ್‌) ಬೆಲೆ 49,200 ರೂಪಾಯಿ ದಾಖಲಾಗಿದೆ.

ಒಟ್ಟಾರೆ ಇಂದು ಬೆಳಗ್ಗಿನ ವೇಳೆಗೆ ದೇಶದ ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಹಾವು ಏಣಿಯಾಟ ಕಂಡು ಬಂದಿದ್ದರೆ, ಬೆಳ್ಳಿ ಬೆಲೆಯಲ್ಲಿಯೂ ಬಹುತೇಕ ಕಡೆಗಳಲ್ಲಿ ಏರಿಳಿತ ಕಂಡು ಬಂದು ಅಚ್ಚರಿ ಮೂಡಿಸಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನಾಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.

ಕೊರೊನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಸೆಪ್ಟೆಂಬರ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.

ಬೆಂಗಳೂರು: 45,100 ರೂ. (22 ಕ್ಯಾರಟ್‌) 49,200 ರೂ. (24 ಕ್ಯಾರಟ್‌)
ಚೆನ್ನೈ: 45,410 ರೂ. (22 ಕ್ಯಾರಟ್‌) 49,540 ರೂ. (24 ಕ್ಯಾರಟ್‌)
ದಿಲ್ಲಿ:46,860 ರೂ. (22 ಕ್ಯಾರಟ್‌), 51,120 ರೂ. (24 ಕ್ಯಾರಟ್‌)
ಹೈದರಾಬಾದ್‌: 45,100 ರೂ. (22 ಕ್ಯಾರಟ್‌) 49,200 ರೂ. (24 ಕ್ಯಾರಟ್‌)
ಕೋಲ್ಕತಾ: 46,560 ರೂ. (22 ಕ್ಯಾರಟ್‌), 49,260 ರೂ. (24 ಕ್ಯಾರಟ್‌)
ಮಂಗಳೂರು: 45,100 ರೂ. (22 ಕ್ಯಾರಟ್‌) 49,200 ರೂ. (24 ಕ್ಯಾರಟ್‌)
ಮುಂಬಯಿ: 46,210 ರೂ. (22 ಕ್ಯಾರಟ್‌), 47,210 ರೂ. (24 ಕ್ಯಾರಟ್‌)
ಮೈಸೂರು: 45,100 ರೂ. (22 ಕ್ಯಾರಟ್‌) 49,200 ರೂ. (24 ಕ್ಯಾರಟ್‌)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+