ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ನವೆಂಬರ್ 09 ರಂದು ಚಿನ್ನದ ಬೆಲೆ ಕೊಂಚ ಇಳಿಕೆ

|
Google Oneindia Kannada News

ನವದೆಹಲಿ, ನವೆಂಬರ್ 09: ದೇಶದ ಪ್ರಮುಖ ನಗರಗಳಲ್ಲಿ ಮಂಗಳವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,110ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,100 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,990 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47, 990 ರೂ. ಇದೆ.

ಹಾಗೆಯೇ ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,150 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,400 ರೂ. ಇದೆ.

Gold And Silver Rate Decreased In Indias Major Cities On November 09, 2021

ಚೆನ್ನೈನಲ್ಲಿ 45,270ರೂ. ಹಾಗೂ ಅಪರಂಜಿ 49,390 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 47, 450 ಹಾಗೂ 50,150 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.

ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ. ಚೆನ್ನೈನಲ್ಲಿ 49,570 ರೂ.ಇದ್ದರೆ, ಮುಂಬೈನಲ್ಲಿ 48,030 ರೂ., ದೆಹಲಿಯಲ್ಲಿ 51,560 ರೂ. ಹಾಗೂ ಕೋಲ್ಕತ್ತದಲ್ಲಿ 50,210 ರೂ. ಇದೆ.

ಬಂಗಾರದ ಬೆಲೆ ದೇಶದಲ್ಲಿ ಏರಿಕೆಯಾದಂತೆ,ಬೆಳ್ಳಿ ದರ ಸಹ ದೇಶದಲ್ಲಿ ಹೆಚ್ಚಾಗಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,400 ರೂ. ಇತ್ತು. ಇಂದು 400 ರೂ. ಹೆಚ್ಚಾಗಿ 64,800 ರೂ. ಆಗಿದೆ. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 64,800 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,100 ರೂ. ಆಗಿದೆ. ಇನ್ನು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ ಸಹ 64,800 ರೂ. ದರ ಇದೆ.

ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

English summary
Gold, silver rate increased in India's major cities including Bengaluru, Chennai, Mumbai, Delhi on November 09, 2021:
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X