Infographics: ಏಪ್ರಿಲ್ 26ರಂದು ಚಿನ್ನದ ದರ ಹೀಗಿದೆ
ನವದೆಹಲಿ, ಏಪ್ರಿಲ್ 26: ಜಾಗತಿಕವಾಗಿ ಉಕ್ರೇನ್ ಹಾಗೂ ರಷ್ಯಾ ಯುದ್ಧದ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಹಲವಾರು ಬಾರಿ ಏರಿಳಿತ ಕಂಡು ಬಂದಿದೆ. ಏಪ್ರಿಲ್ 25ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿ ಬೆಲೆ ಸ್ಥಿರವಾಗಿದೆ. ಈ ವೇಳೆಯಲ್ಲೇ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಏಪ್ರಿಲ್ 26ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 51750.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.44ರಷ್ಟು ಏರಿಕೆಯಾಗಿ 1,908.14 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.03ರಷ್ಟು ಏರಿಕೆಯಾಗಿದ್ದು, 23.7 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,450 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,860 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,450 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,860 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,860 ರೂ. ಇದೆ. ಚೆನ್ನೈನಲ್ಲಿ 48,810 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,250 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,450 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,860 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 49 ಸಾವಿರದಿಂದ 53 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 48 ಸಾವಿರದಿಂದ 53 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನ ಬೆಳ್ಳಿ ದರ
ಕಳೆದ ಹತ್ತು ದಿನದಲ್ಲಿ ನಾಲ್ಕು ಬಾರಿ ಚಿನ್ನದ ದರವು ಸ್ಥಿರವಾಗಿದ್ದರೆ, ನಾಲ್ಕು ಬಾರಿ ಇಳಿಕೆ, ಎರಡು ಬಾರಿ ಏರಿಕೆ ಕಂಡಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ಈಗ ಇಳಿಕೆ ಆಗುತ್ತಿರುವ ಚಿನ್ನದ ದರವು ಏರಿಕೆ ಆಗುವ ನಿರೀಕ್ಷೆ ಇದೆ. ಭವಿಷ್ಯದಲ್ಲಿ ಹೆಚ್ಚುವರಿ ಏರಿಕೆ ಸಾಧ್ಯತೆ ಇದೆ. ಡಾಲರ್ ಸೂಚ್ಯಂಕ ಮತ್ತು ಹೆಚ್ಚುತ್ತಿರುವ ಬಾಂಡ್ ಇಳುವರಿ, ನಿನ್ನೆಯ ವಹಿವಾಟಿನಲ್ಲಿ 1900 ಡಾಲರ್ ಮಟ್ಟಕ್ಕಿಂತ ಕಡಿಮೆಯಾಗಿದ್ದು ಚಿನ್ನದ ಬೆಲೆಯನ್ನು ಪರಿಣಾಮಕಾರಿಯಾಗಿ ಕೆಳಕ್ಕೆ ತಳ್ಳಿದೆ. ಬೆಲೆ ಬಾಳುವ ಈ ಹಳದಿ ಲೋಹವು 1890 ಡಾಲರ್ ಮಟ್ಟದಲ್ಲಿ ಕೊಂಚ ಏರಿಕೆ ಆಗಿದೆ," ಎಂದು ಆಕ್ಸಿಸ್ ಸೆಕ್ಯುರಿಟೀಸ್‌ನ ಪ್ರೀತಮ್ ಪಾಟ್ನಯಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,980 ರೂ, 53,430 ರೂ
ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,500 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)












Click it and Unblock the Notifications