Infographics: ಮಾರ್ಚ್ 30ರಂದು ಚಿನ್ನದ ದರ ಹೇಗಿದೆ?
ನವದೆಹಲಿ, ಮಾರ್ಚ್ 30: ಉಕ್ರೇನ್ ಹಾಗೂ ರಷ್ಯಾ, ಜಾಗತಿಕವಾಗಿ ಇಂಧನ ದರ ಏರಿಳಿತದ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಮಾರ್ಚ್ 30ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿ ಬೆಲೆ ಇಳಿಕೆ ಕಂಡಿದೆ. ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಮಾರ್ಚ್ 30ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 51120.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.41ರಷ್ಟು ಏರಿಕೆಯಾಗಿ 1,924.44 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.50ರಷ್ಟು ಏರಿಕೆಯಾಗಿದ್ದು, 24.88 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,650 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,980 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,650 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,980 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,650 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,980 ರೂ. ಇದೆ. ಚೆನ್ನೈನಲ್ಲಿ 47,920 ರೂ. ಹಾಗೂ ಅಪರಂಜಿ 52,280 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,650 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,980 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 47 ಸಾವಿರದಿಂದ 52 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 47 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
ಚಿನ್ನದ ಬೆಲೆಯು ಸತತ ಮೂರನೇ ದಿನ ಇಳಿಕೆ ಕಂಡಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎವಿಪಿ - ರಿಸರ್ಚ್ ಕಮೋಡಿಟೀಸ್‌ನ ಅಮಿತ್ ಖಾರೆ "ರಷ್ಯಾ-ಉಕ್ರೇನ್ ಬಿಕ್ಕಟ್ಟಿನ ಕಾರಣದಿಂದಾಗಿ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯು ತುಂಬಾ ಸಂಕುಚಿತವಾಗಿದೆ. ತಾಂತ್ರಿಕ ಚಾರ್ಟ್ ಪ್ರಕಾರ, ಚಿನ್ನ ಮತ್ತು ಬೆಳ್ಳಿ ಈಗ ದುರ್ಬಲವಾಗುತ್ತಿರುವುದು ಕಂಡು ಬಂದಿದೆ. ಮೊಮೆಂಟಮ್ ಇಂಡಿಕೇಟರ್ ಆರ್‌ಎಸ್‌ಐ ಪ್ರಕಾರವು ಚಿನ್ನ, ಬೆಳ್ಳಿಯ ಮೌಲ್ಯವು ದುರ್ಬಲವಾಗುತ್ತಿದೆ," ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 30: 47,650 ರೂ, 51,980 ರೂ
ಮಾರ್ಚ್ 29: 47,950 ರೂ, 52,310 ರೂ
ಮಾರ್ಚ್ 28: 47,950 ರೂ, 52,310 ರೂ
ಮಾರ್ಚ್ 27: 48,200 ರೂ, 52,590 ರೂ
ಮಾರ್ಚ್ 26: 48,200 ರೂ, 52,590 ರೂ
ಮಾರ್ಚ್ 25: 48,200 ರೂ, 52,590 ರೂ
ಮಾರ್ಚ್ 24: 47,950 ರೂ, 52,310 ರೂ
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)












Click it and Unblock the Notifications