Infographics: ಅ. 31ರಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಏರಿಳಿತ?

ನವದೆಹಲಿ, ಅಕ್ಟೋಬರ್ 31: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಾರಾಂತ್ಯದ ಕರ್ಫ್ಯೂ ಕೂಡಾ ತೆರವುಗೊಂಡಿದ್ದು, ದೀಪಾವಳಿ ಹಬ್ಬದ ಋತುವಿನಲ್ಲಿ ಚಿನಿವಾರ ಪೇಟೆಯಲ್ಲಿ ವಹಿವಾಟಿನಲ್ಲಿ ಏರಿಕೆ ಕಾಣುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಕೆಲವೆಡೆ ವಹಿವಾಟು ಹೆಚ್ಚಿನ ಪ್ರಗತಿ ಕಾಣುತ್ತಿಲ್ಲ. ಅಕ್ಟೋಬರ್ 31ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್ ನಲ್ಲಿ ಅಕ್ಟೋಬರ್ 29ರ ವಹಿವಾಟು ಅಂತ್ಯಕ್ಕೆ ಫ್ಯೂಚರ್ ಗೋಲ್ಡ್ ಕೊಂಚ ತಗ್ಗಿ 47,607 ರು ಹಾಗೂ ಬೆಳ್ಳಿ ಬೆಲೆ ತಗ್ಗಿ 64,540ರು ಗೆ ಏರಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ 0.90ರಷ್ಟು ಏರಿಕೆಯಾಗಿ 1,783.56 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.77 ಏರಿಕೆಯಾಗಿ 24.89 ಯುಎಸ್ ಡಾಲರ್ ಆಗಿದೆ.

ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1808.04 ಡಾಲರ್ ಹಾಗೂ ಕನಿಷ್ಠ 1728.92 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 24.55 ಡಾಲರ್ ಹಾಗೂ ಕನಿಷ್ಠ 21.57 ಡಾಲರ್ ಮುಟ್ಟಿತ್ತು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಅಕ್ಟೋಬರ್ 31ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 47,836ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಕುಸಿತ ಕಂಡಿದೆ. ಬೆಳ್ಳಿ ಆರಂಭದಲ್ಲಿ 64,695ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಇಳಿಕೆಯಾಗಿದೆ.

ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಸೆಪ್ಟೆಂಬರ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 44,700ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 48,770 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 68,900 ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 64,600ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಇಲ್ಲಿದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+