ಡಿ.9ರಂದು ಪ್ರಮುಖ ನಗರದಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ?
ನವದೆಹಲಿ, ಡಿಸೆಂಬರ್ 9: ದೇಶದ ಹಲವೆಡೆ ಚಿನ್ನ ಮತ್ತು ಬೆಳ್ಳಿಯ ದರವು ಸ್ಥಿರವಾಗಿದೆ. ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿರುವುದರ ನಡುವೆ ಚಿನಿವಾರ ಪೇಟೆಯಲ್ಲಿ ಉತ್ತಮ ವಹಿವಾಟು ಕಂಡರೂ ಹಳದಿ ಲೋಹ ನಿರೀಕ್ಷಿತ ಏರಿಕೆ ಕಂಡಿಲ್ಲ. ಡಿಸೆಂಬರ್ 9ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿದೆ. ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್ ನಲ್ಲಿ ಡಿಸೆಂಬರ್ 09ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,016ರು ಹಾಗೂ ಬೆಳ್ಳಿ ಬೆಲೆ ಕುಗ್ಗಿ ಕಂಡು 61,361.00ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ +2,ಇಳಿಕೆಯಾಗಿ 1,787 ಯುಎಸ್ ಡಾಲರ್‌ನಷ್ಟಿದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಡಿಸೆಂಬರ್ 4ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 48,016ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಏರಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 61,361ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಏರಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಸಿಲಿಕಾನ್ ಸಿಟಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 44,950ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,040ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,840ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,840ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,100 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,390ರೂ. ಇದೆ. ಚೆನ್ನೈನಲ್ಲಿ45,220ರೂ. ಹಾಗೂ ಅಪರಂಜಿ49,330ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 47,100 ಹಾಗೂ 49,800ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 48 ಸಾವಿರದ ಆಸುಪಾಸಿನಲ್ಲಿದೆ.

ಬೆಳ್ಳಿ ಮತ್ತು ಚಿನ್ನದ ಬೆಲೆ ಏರಿಳಿತಕ್ಕೆ ಕಾರಣವೇನು?
ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್ ತೆರವು, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಚಿನ್ನದ ಬೆಲೆ ನಿರ್ಧಾರ ಆಗುವುದು ಹೇಗೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.












Click it and Unblock the Notifications