Infographics: ನ.16ರಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಚೇತರಿಕೆ

ನವದೆಹಲಿ, ನವೆಂಬರ್ 16: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ,ಕರ್ಫ್ಯೂ ಸಡಿಲಗೊಂಡಿದೆ. ದೀಪಾವಳಿ ಹಬ್ಬದ ಋತುವಿನಲ್ಲಿ ಚಿನಿವಾರ ಪೇಟೆಯಲ್ಲಿ ಉತ್ತಮ ವಹಿವಾಟು ಕಂಡರೂ ಹಳದಿ ಲೋಹ ನಿರೀಕ್ಷಿತ ಏರಿಕೆ ಕಂಡಿಲ್ಲ. ನವೆಂಬರ್ 16ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್ ನಲ್ಲಿ ನವೆಂಬರ್ 16ರ ವಹಿವಾಟು ಅಂತ್ಯಕ್ಕೆ ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49, 456 ರು ಹಾಗೂ ಬೆಳ್ಳಿ ಬೆಲೆ ತಗ್ಗಿ 66,655 ರು ಗೆ ಏರಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ 0.07ರಷ್ಟು ಏರಿಕೆಯಾಗಿ 1,862.03ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.02 ಇಳಿಕೆಯಾಗಿ 25.06 ಯುಎಸ್ ಡಾಲರ್ ಆಗಿದೆ.

ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1865.35 ಡಾಲರ್ ಹಾಗೂ ಕನಿಷ್ಠ 1763.90 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 25.33ಡಾಲರ್ ಹಾಗೂ ಕನಿಷ್ಠ 23.20 ಡಾಲರ್ ಮುಟ್ಟಿತ್ತು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ನವೆಂಬರ್ 16ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 49,340ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಏರಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 66,800ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಏರಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್ ತೆರವು, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 250 ರು ಏರಿಕೆಯಾಗಿ 46,150ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 280 ರು ಏರಿಕೆಯಾಗಿ 50,350 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 71,500 ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 66,800ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಇಲ್ಲಿದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+