Infographics: ನ.20ರಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?

ನವದೆಹಲಿ, ನವೆಂಬರ್ 20: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ದೀಪಾವಳಿ ಹಬ್ಬದ ಋತುವಿನಲ್ಲಿ ಚಿನಿವಾರ ಪೇಟೆಯಲ್ಲಿ ಉತ್ತಮ ವಹಿವಾಟು ಕಂಡರೂ ಹಳದಿ ಲೋಹ ನಿರೀಕ್ಷಿತ ಏರಿಕೆ ಕಂಡಿಲ್ಲ. ನವೆಂಬರ್ 20ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿದೆ. ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಕಳೆದ 24 ಗಂಟೆಗಳಿಂದ ಭಾರತದಲ್ಲಿ ಶನಿವಾರ ಚಿನ್ನದ ಬೆಲೆ ಬದಲಾಗದೆ ಉಳಿದಿದೆ. ಹಳದಿ ಲೋಹವು 10 ಗ್ರಾಂ (24-ಕ್ಯಾರೆಟ್) ಗೆ 49,100 ರೂ.ಗೆ ಮತ್ತು 10 ಗ್ರಾಂ (22-ಕ್ಯಾರೆಟ್) ಗೆ 48,100 ರೂ. ಆದರೆ, ಬೆಳ್ಳಿಯ ಬೆಲೆ 1 ಕೆಜಿಗೆ 300 ರೂಪಾಯಿ ಇಳಿಕೆಯಾಗಿದ್ದು, ಕೆಜಿಗೆ 66,000 ರೂಪಾಯಿಗೆ ಮಾರಾಟವಾಗುತ್ತಿದೆ.

ಇದರ ಮಧ್ಯೆ ದೇಶಾದ್ಯಂತ ಬದಲಾಗುವ ಅಬಕಾರಿ ಸುಂಕ, ರಾಜ್ಯ ತೆರಿಗೆಗಳು ಮತ್ತು ಮೇಕಿಂಗ್ ಚಾರ್ಜ್‌ಗಳಿಂದಾಗಿ ವಿವಿಧ ಮೆಟ್ರೋ ನಗರಗಳು ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಏರಿಳಿತವನ್ನು ಕಂಡಿವೆ.

ಮಲ್ಟಿ ಕಮೊಡಿಟಿ ಎಕ್ಸ್‌ಚೇಂಜ್ ಡೇಟಾದಲ್ಲಿನ ಇತ್ತೀಚಿನ ಪ್ರವೃತ್ತಿಗಳ ಪ್ರಕಾರ, ಚಿನ್ನದ ಭವಿಷ್ಯದ ಮೌಲ್ಯವು 0.40 ಪ್ರತಿಶತದಷ್ಟು ಕುಸಿದು ರೂ 48,864.00ಕ್ಕೆ ತಲುಪಿದೆ. ಬೆಳ್ಳಿಯ ಫ್ಯೂಚರ್ಸ್ ಕೂಡ ಶೇಕಡಾ 0.53 ರಷ್ಟು ಕುಸಿತವನ್ನು ಕಂಡಿದ್ದು, 65,620.00 ರೂಪಾಯಿ ಆಸುಪಾಸಿನಲ್ಲಿ ಸ್ಥಿರವಾಗಿದೆ. ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1865.35 ಡಾಲರ್ ಹಾಗೂ ಕನಿಷ್ಠ 1763.90 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 25.33ಡಾಲರ್ ಹಾಗೂ ಕನಿಷ್ಠ 23.20 ಡಾಲರ್ ಮುಟ್ಟಿತ್ತು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ನವೆಂಬರ್ 20ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 49,049ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಏರಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 65,970ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಏರಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಬೆಳ್ಳಿ ಮತ್ತು ಚಿನ್ನದ ಬೆಲೆ ಏರಿಳಿತಕ್ಕೆ ಕಾರಣವೇನು?

ಬೆಳ್ಳಿ ಮತ್ತು ಚಿನ್ನದ ಬೆಲೆ ಏರಿಳಿತಕ್ಕೆ ಕಾರಣವೇನು?

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್ ತೆರವು, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?

ಸಿಲಿಕಾನ್ ಸಿಟಿಯಲ್ಲಿ 10 ಗ್ರಾಂ ಚಿನ್ನದ ಬೆಲೆ ಎಷ್ಟಿದೆ?

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 45.750ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 49,910 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 70,400ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 65,600ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಇಲ್ಲಿದೆ.

ಚಿನ್ನದ ಬೆಲೆ ನಿರ್ಧಾರ ಆಗುವುದು ಹೇಗೆ?

ಚಿನ್ನದ ಬೆಲೆ ನಿರ್ಧಾರ ಆಗುವುದು ಹೇಗೆ?

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+