Infographics: ಏಪ್ರಿಲ್ 16ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ನವದೆಹಲಿ, ಏಪ್ರಿಲ್ 16: ಭಾರತದಲ್ಲಿ ಪ್ರತಿನಿತ್ಯ ಗಗನಮುಖಿಯಾಗಿ ಏರಿಕೆ ಆಗುತ್ತಿದ್ದ ಚಿನ್ನದ ಬೆಲೆಯಲ್ಲಿ ಶನಿವಾರ ಸ್ಥಿರತೆ ಕಂಡು ಬಂದಿದೆ. ಏಪ್ರಿಲ್ 15ರಂದು ಗುಡ್ ಫ್ರೈಡೇ ದಿನದ ಹಿನ್ನೆಲೆ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಯಾವುದೇ ಏರಿಳಿತ ಆಗಿರಲಿಲ್ಲ. ಶನಿವಾರ ಕೂಡ ಚಿನ್ನದ ಬೆಲೆಯು ಸ್ಥಿರವಾಗಿದೆ. ಆದರೆ ಬೆಳ್ಳಿ ದರದಲ್ಲಿ 4200 ರೂಪಾಯಿ ಏರಿಕೆಯಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 54,060 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 4200 ರೂಪಾಯಿ ಏರಿಕೆಯಾಗಿದ್ದು, 74,200 ರೂಪಾಯಿಗೆ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,060 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,060 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 54,060 ರೂ. ಇದೆ. ಚೆನ್ನೈನಲ್ಲಿ 50,050 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 54,600 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,550 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 54,060 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 14ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52991 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.05ರಷ್ಟು ಏರಿಕೆಯಾಗಿ 1,974.80 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.96ರಷ್ಟು ಇಳಿಕೆಯಾಗಿದ್ದು, 25.32 ಯುಎಸ್ ಡಾಲರ್ ಆಗಿದೆ.
"ರಷ್ಯಾ ಉಕ್ರೇನ್ ಯುದ್ಧ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಏರಿಕೆ ಕಂಡಿದೆ. ಜಾಗತಿಕ ಷೇರು ಮಾರುಕಟ್ಟೆಗಳಲ್ಲಿನ ಭಾರೀ ಮಾರಾಟ ಮತ್ತು ಅಂತರರಾಷ್ಟ್ರೀಯ ಕಚ್ಚಾ ತೈಲದ ದಾಖಲೆಯ ಏರಿಕೆಯ ನಡುವೆ ಎರಡೂ ಅಮೂಲ್ಯವಾದ ಲೋಹಗಳು ಏರಿಕೆ ಆಗಿದೆ. ನ್ನ ಮತ್ತು ಬೆಳ್ಳಿಯ ಬೆಲೆಗಳು ಪಾಸಿಟಿವ್ ರೂಪದಲ್ಲೇ ಉಳಿಯಲಿದೆ. ಬೆಲೆಗಳಲ್ಲಿನ ಯಾವುದೇ ಕುಸಿತವಾದರೆ ಅದು ಖರೀದಿ ಮಾಡಲು ಅವಕಾಶ," ಎಂದು ಮೆಹ್ತಾ ಇಕ್ವಿಟೀಸ್ ಲಿಮಿಟೆಡ್‌ನ ರಾಹುಲ್ ಕಲಾಂತ್ರಿ ಹೇಳಿದ್ದಾರೆ.

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 16: 49,550 ರೂ, 54,060 ರೂ
ಏಪ್ರಿಲ್ 15: 49,550 ರೂ, 54,060 ರೂ
ಏಪ್ರಿಲ್ 14: 49,550 ರೂ, 54,060 ರೂ
ಏಪ್ರಿಲ್ 13: 49,350 ರೂ, 53,840 ರೂ
ಏಪ್ರಿಲ್ 12: 49,000 ರೂ, 53,450 ರೂ
ಏಪ್ರಿಲ್ 11: 48,600 ರೂ, 53,020 ರೂ
ಏಪ್ರಿಲ್ 10: 48,600 ರೂ, 53,020 ರೂ
ಬೆಳ್ಳಿ ಬೆಲೆ ಕೆ.ಜಿಗೆ 74,200 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)












Click it and Unblock the Notifications