Infographics: ಏಪ್ರಿಲ್ 2ರಂದು ದೇಶದಲ್ಲಿ ಹೇಗಿದೆ ಚಿನ್ನದ ಬೆಲೆ?
ನವದೆಹಲಿ, ಏಪ್ರಿಲ್ 2: ಯುಗಾದಿ ಹಬ್ಬದ ದಿನವೇ ಚಿನ್ನ-ಬೆಳ್ಳಿ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆಯಾಗಿದೆ. ಭಾರತದಲ್ಲಿ ಶನಿವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ಇಳಿಕೆಯಾದರೆ, 1 ಕೆಜಿ ಬೆಳ್ಳಿ ದರದಲ್ಲಿ 800 ರೂಪಾಯಿ ಇಳಿಕೆಯಾಗಿದೆ.
ದೇಶದಲ್ಲಿ ಏಪ್ರಿಲ್ 2ರಂದು 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ಇಳಿಕೆಯಾಗಿದ್ದು, 47,950 ರೂಪಾಯಿ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಏರಿಕೆ ಆಗಿದೆ. ಪ್ರಸ್ತುತ ಬೆಲೆಯು 52,480 ರೂಪಾಯಿ ಆಗಿದೆ. ಈ ನಡುವೆ ದೇಶದಲ್ಲಿ ಬೆಳ್ಳಿ ಬೆಲೆಯಲ್ಲಿ 800 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿ ದರವು 1 ಕೆ.ಜಿ ಗೆ 66,800 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,480 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,480 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,480 ರೂ. ಇದೆ. ಚೆನ್ನೈನಲ್ಲಿ 48,200 ರೂ. ಹಾಗೂ ಅಪರಂಜಿ 52,580 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,950 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,480 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 48 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 52 ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದಿದೆ ಓದಿ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಗ್ಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಚಿನ್ನ ಮತ್ತು ಕಚ್ಚಾತೈಲದ ಬೆಲೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟವು ರಷ್ಯಾದ ಅತಿದೊಡ್ಡ ಬ್ಯಾಂಕ್‌ಗಳು ಮತ್ತು ಅದರ ಗಣ್ಯರ ಮೇಲೆ ನಿರ್ಬಂಧಗಳನ್ನು ವಿಧಿಸಿದೆ," ಶೇರ್‌ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 2ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51275 ರೂ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.63ರಷ್ಟು ಇಳಿಕೆಯಾಗಿ 1,924.80 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.77ರಷ್ಟು ಇಳಿಕೆಯಾಗಿದ್ದು, 24.62 ಯುಎಸ್ ಡಾಲರ್ ಆಗಿದೆ.
"ರಷ್ಯಾ ಉಕ್ರೇನ್ ಯುದ್ಧ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಏರಿಕೆ ಕಂಡಿದೆ. ಜಾಗತಿಕ ಷೇರು ಮಾರುಕಟ್ಟೆಗಳಲ್ಲಿನ ಭಾರೀ ಮಾರಾಟ ಮತ್ತು ಅಂತರರಾಷ್ಟ್ರೀಯ ಕಚ್ಚಾ ತೈಲದ ದಾಖಲೆಯ ಏರಿಕೆಯ ನಡುವೆ ಎರಡೂ ಅಮೂಲ್ಯವಾದ ಲೋಹಗಳು ಏರಿಕೆ ಆಗಿದೆ. ನ್ನ ಮತ್ತು ಬೆಳ್ಳಿಯ ಬೆಲೆಗಳು ಪಾಸಿಟಿವ್ ರೂಪದಲ್ಲೇ ಉಳಿಯಲಿದೆ. ಬೆಲೆಗಳಲ್ಲಿನ ಯಾವುದೇ ಕುಸಿತವಾದರೆ ಅದು ಖರೀದಿ ಮಾಡಲು ಅವಕಾಶ," ಎಂದು ಮೆಹ್ತಾ ಇಕ್ವಿಟೀಸ್ ಲಿಮಿಟೆಡ್‌ನ ರಾಹುಲ್ ಕಲಾಂತ್ರಿ ಹೇಳಿದ್ದಾರೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 2: 47,950 ರೂ, 52,480 ರೂ
ಏಪ್ರಿಲ್ 1: 48,100 ರೂ, 52,470 ರೂ
ಮಾರ್ಚ್ 31: 47,650 ರೂ, 51,980 ರೂ
ಮಾರ್ಚ್ 30: 47,650 ರೂ, 51,980 ರೂ
ಮಾರ್ಚ್ 29: 47,750 ರೂ, 52,100 ರೂ
ಮಾರ್ಚ್ 28: 47,950 ರೂ, 52,550 ರೂ
ಮಾರ್ಚ್ 27: 48,200 ರೂ, 52,590 ರೂ
ಬೆಳ್ಳಿ ಬೆಲೆ ಕೆ.ಜಿಗೆ 71,700 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)












Click it and Unblock the Notifications