Infographics: ಏಪ್ರಿಲ್ 22ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ನವದೆಹಲಿ, ಏಪ್ರಿಲ್ 22: ದೇಶದಲ್ಲಿ ಚಿನ್ನದ ಬೆಲೆಯು ಏರಿಳಿತ ಕಾಣುತ್ತಿದೆ. ಏಪ್ರಿಲ್ 21ರಂದು ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಏಪ್ರಿಲ್ 20ರಂದು ಇಳಿಕೆ ಕಂಡಿತ್ತು. ಇಂದು ದೇಶದಲ್ಲಿ ಚಿನ್ನದ ಬೆಲೆಯು ಸ್ಥಿರವಾಗಿದೆ. ಏಪ್ರಿಲ್ 22ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,300 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 53,780 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 300 ರೂಪಾಯಿ ಇಳಿಕೆಯಾಗಿದ್ದು, 67,100 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,780 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,780 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,780 ರೂ. ಇದೆ. ಚೆನ್ನೈನಲ್ಲಿ 49,460 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,960 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,300 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,780 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 22ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52636.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.11ರಷ್ಟು ಏರಿಕೆಯಾಗಿ 1,953.36 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.41ರಷ್ಟು ಇಳಿಕೆಯಾಗಿದ್ದು, 24.52 ಯುಎಸ್ ಡಾಲರ್ ಆಗಿದೆ.

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ
ಏಪ್ರಿಲ್ 16: 49,550 ರೂ, 54,060 ರೂ
ಏಪ್ರಿಲ್ 15: 49,550 ರೂ, 54,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 72,100 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications