Infographics: ಏಪ್ರಿಲ್ 23ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ನವದೆಹಲಿ, ಏಪ್ರಿಲ್ 23: ಭಾರತದ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಶನಿವಾರ ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರದಲ್ಲಿ 300 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ 500 ರೂಪಾಯಿ ತಗ್ಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 53,620 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 500 ರೂಪಾಯಿ ಇಳಿಕೆಯಾಗಿದ್ದು, 66,600 ರೂಪಾಯಿಗೆ ಹೆಚ್ಚಾಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,450 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,450 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,450 ರೂ. ಇದೆ. ಚೆನ್ನೈನಲ್ಲಿ 49,450 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,950 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,000 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,450 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 23ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52254 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.99ರಷ್ಟು ಇಳಿಕೆಯಾಗಿ 1,931.96 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.00ರಷ್ಟು ಇಳಿಕೆಯಾಗಿದ್ದು, 24.14 ಯುಎಸ್ ಡಾಲರ್ ಆಗಿದೆ.

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಏಪ್ರಿಲ್ 20: 49,150 ರೂ, 53,620 ರೂ
ಏಪ್ರಿಲ್ 19: 49,850 ರೂ, 54,380 ರೂ
ಏಪ್ರಿಲ್ 18: 49,850 ರೂ, 54,380 ರೂ
ಏಪ್ರಿಲ್ 17: 49,550 ರೂ, 54,060 ರೂ
ಬೆಳ್ಳಿ ಬೆಲೆ ಕೆ.ಜಿಗೆ 71,600 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ












Click it and Unblock the Notifications