Infographics: ಏಪ್ರಿಲ್ 27ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ನವದೆಹಲಿ, ಏಪ್ರಿಲ್ 27: ಭಾರತದ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಮಂಗಳವಾರ 540 ರೂಪಾಯಿ ಇಳಿಕೆಯಾಗಿದ್ದ ಚಿನ್ನದ ದರ ಬುಧವಾರ ಸ್ಥಿರವಾಗಿದೆ. ಬೆಳ್ಳಿ ದರ ಬುಧವಾರವೂ 450 ರೂಪಾಯಿ ಇಳಿಕೆಯಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 48,990 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 53,440 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 250 ರೂಪಾಯಿ ಇಳಿಕೆಯಾಗಿದ್ದು, 65,000 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,450 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,860 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,450 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,860 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,450 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,860 ರೂ. ಇದೆ. ಚೆನ್ನೈನಲ್ಲಿ 48,810 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,250 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,450 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,860 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 27ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 51475 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.49ರಷ್ಟು ಇಳಿಕೆಯಾಗಿ 1,897.33 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.55ರಷ್ಟು ಇಳಿಕೆಯಾಗಿದ್ದು, 23.48 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಏಪ್ರಿಲ್ 21: 49,300 ರೂ, 53,780 ರೂ
ಬೆಳ್ಳಿ ಬೆಲೆ ಕೆ.ಜಿಗೆ 70,000 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ -
Zomato: ಹಸಿದ ಹೊಟ್ಟೆಗೆ ಜೊಮ್ಯಾಟೋ ಬರೆ.. ಆನ್ಲೈನ್ ಊಟ ಬಲು ದುಬಾರಿ -
Petrol Price: 1947ರಲ್ಲಿ ಕೇವಲ 25 ಪೈಸೆ ಇದ್ದ ಪೆಟ್ರೋಲ್ ಈಗ 100ರ ಗಡಿ ದಾಟಿದ್ದೇಗೆ? ಇಲ್ಲಿದೆ ತೈಲ ದರದ ಕುತೂಹಲಕಾರಿ ಇತಿಹಾಸ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ












Click it and Unblock the Notifications