Infographics: ಏಪ್ರಿಲ್ 29ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ನವದೆಹಲಿ, ಏಪ್ರಿಲ್ 29: ಭಾರತದ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ದೇಶದಲ್ಲಿ ಗುರುವಾರ ಚಿನ್ನದ ಬೆಲೆ 550 ರೂಪಾಯಿ ಏರಿಕೆಯಾಗಿದ್ದು, ಬೆಳ್ಳಿ ಬೆಲೆಯಲ್ಲೂ 200 ರೂಪಾಯಿ ಏರಿಕೆಯಾಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 48,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 52,960 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರ 64,000 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,550 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,960 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,550 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,960 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,550 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,960 ರೂ. ಇದೆ. ಚೆನ್ನೈನಲ್ಲಿ 48,840 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,280 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,550 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,960 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 29ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 51738 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.08ರಷ್ಟು ಏರಿಕೆಯಾಗಿ 1,916.10 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.43ರಷ್ಟು ಏರಿಕೆಯಾಗಿದ್ದು, 23.50 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಏಪ್ರಿಲ್ 24: 48,990 ರೂ, 53,440 ರೂ
ಏಪ್ರಿಲ್ 23: 49,000 ರೂ, 53,450 ರೂ
ಏಪ್ರಿಲ್ 22: 49,300 ರೂ, 53,780 ರೂ
ಬೆಳ್ಳಿ ಬೆಲೆ ಕೆ.ಜಿಗೆ 68,800 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
Akshaya Tritiya Special: ಅಕ್ಷಯ ತೃತೀಯ ಸ್ಪೆಷಲ್: ಪುರುಷರ ಚಿನ್ನದ ಆಭರಣಗಳಲ್ಲಿ ಹೊಸ ಟ್ರೆಂಡ್ಸ್ ವಿವರ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
ಪೆಟ್ರೋಲ್ ಪ್ರತಿ ಲೀಟರ್ಗೆ 18 ರೂ, ಡೀಸೆಲ್ 35 ರೂಪಾಯಿ ದರ ಹೆಚ್ಚಳ ಸಾಧ್ಯತೆ: ಭಾರತೀಯರಲ್ಲಿ ಗಾಬರಿ ಹುಟ್ಟಿಸಿದೆ ಈ ಲೆಕ್ಕಾಚಾರ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು












Click it and Unblock the Notifications