Infographics: ಏಪ್ರಿಲ್ 9ರಂದು ದೇಶದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಎಷ್ಟಿದೆ?
ನವದೆಹಲಿ, ಏಪ್ರಿಲ್ 9: ಭಾರತದಲ್ಲಿ ಚಿನ್ನ-ಬೆಳ್ಳಿ ದರ ಗಗನಮುಖಿ ಆಗುತ್ತಿದೆ. ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 600 ರೂಪಾಯಿ ಏರಿಕೆ ಕಂಡಿದೆ. ಶನಿವಾರ ಒಂದೇ ದಿನ 350 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 300 ರೂಪಾಯಿ ಏರಿಕೆಯಾಗಿದೆ.
ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 350 ರೂಪಾಯಿ ಏರಿಕೆಯಾಗಿದ್ದು, 48,600 ರೂಪಾಯಿ ಆಗಿದೆ. ಈ ಸಂದರ್ಭದಲ್ಲೇ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 390 ರೂಪಾಯಿ ಏರಿಕೆ ಆಗಿದೆ. ಪ್ರಸ್ತುತ ಬೆಲೆಯು 53,020 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,600 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,020 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,600 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,020 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,600 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,020 ರೂ. ಇದೆ. ಚೆನ್ನೈನಲ್ಲಿ 49,190 ರೂ. ಹಾಗೂ ಅಪರಂಜಿ 53,660 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,600 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,020 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 48 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 52 ಸಾವಿರಕ್ಕಿಂತ ಹೆಚ್ಚಾಗಿದೆ. ಕಳೆದ ಒಂದು ವಾರದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಎಷ್ಟು ವ್ಯತ್ಯಾಸವಾಗಿದೆ ಎಂಬುದರ ಪಟ್ಟಿ ಮುಂದೆ ಓದಿ.
ಚಿನ್ನ ಬೆಳ್ಳಿ ದರ:
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ:
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಏಪ್ರಿಲ್ 9ರ ವಹಿವಾಟು ಫ್ಯೂಚರ್ ಗೋಲ್ಡ್ ಏರಿಕೆಯಾಗಿದ್ದು, 52099 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.74ರಷ್ಟು ಏರಿಕೆಯಾಗಿ 1,947.57 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.57ರಷ್ಟು ಏರಿಕೆಯಾಗಿದ್ದು, 24.78 ಯುಎಸ್ ಡಾಲರ್ ಆಗಿದೆ.
"ರಷ್ಯಾ ಉಕ್ರೇನ್ ಯುದ್ಧ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಏರಿಕೆ ಕಂಡಿದೆ. ಜಾಗತಿಕ ಷೇರು ಮಾರುಕಟ್ಟೆಗಳಲ್ಲಿನ ಭಾರೀ ಮಾರಾಟ ಮತ್ತು ಅಂತರರಾಷ್ಟ್ರೀಯ ಕಚ್ಚಾ ತೈಲದ ದಾಖಲೆಯ ಏರಿಕೆಯ ನಡುವೆ ಎರಡೂ ಅಮೂಲ್ಯವಾದ ಲೋಹಗಳು ಏರಿಕೆ ಆಗಿದೆ. ನ್ನ ಮತ್ತು ಬೆಳ್ಳಿಯ ಬೆಲೆಗಳು ಪಾಸಿಟಿವ್ ರೂಪದಲ್ಲೇ ಉಳಿಯಲಿದೆ. ಬೆಲೆಗಳಲ್ಲಿನ ಯಾವುದೇ ಕುಸಿತವಾದರೆ ಅದು ಖರೀದಿ ಮಾಡಲು ಅವಕಾಶ," ಎಂದು ಮೆಹ್ತಾ ಇಕ್ವಿಟೀಸ್ ಲಿಮಿಟೆಡ್‌ನ ರಾಹುಲ್ ಕಲಾಂತ್ರಿ ಹೇಳಿದ್ದಾರೆ.
ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಏಪ್ರಿಲ್ 9: 48,600 ರೂ, 53,020 ರೂ
ಏಪ್ರಿಲ್ 8: 48,250 ರೂ, 52,630 ರೂ
ಏಪ್ರಿಲ್ 7: 48,000 ರೂ, 52,370 ರೂ
ಏಪ್ರಿಲ್ 6: 47,800 ರೂ, 52,140 ರೂ
ಏಪ್ರಿಲ್ 5: 47,800 ರೂ, 52,140 ರೂ
ಏಪ್ರಿಲ್ 4: 47,800 ರೂ, 52,140 ರೂ
ಏಪ್ರಿಲ್ 3: 47,950 ರೂ, 52,460 ರೂ
ಬೆಳ್ಳಿ ಬೆಲೆ ಕೆ.ಜಿಗೆ 71,500 ರೂಪಾಯಿ
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?:
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)












Click it and Unblock the Notifications