ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಮಾ.21ರಂದು ದೇಶದಲ್ಲಿ ಹೇಗಿದೆ ಚಿನ್ನದ ದರ?

|
Google Oneindia Kannada News

ನವದೆಹಲಿ, ಮಾರ್ಚ್ 21: ಭಾರತದಲ್ಲಿ ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಎಂದಿನಂತೆ ಚಿನ್ನ-ಬೆಳ್ಳಿ ದರಗಳಲ್ಲಿ ಏರಿಳಿತ ಮುಂದುವರಿದಿದೆ. ಇಂದು ಚಿನ್ನದ ಬೆಲೆಯು ಏರಿಕೆ ಕಂಡು ಬಂದಿದ್ದು, ಮಾರ್ಚ್ 21ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂಗೆ ಹಾಗೂ ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಚೆನ್ನೈನಲ್ಲಿ 47,930 ರೂ. ಹಾಗೂ ಅಪರಂಜಿ 52,290 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಚಿನ್ನ ದುಬಾರಿ: ಮಾ.21ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಏರಿಕೆ ಆಗಿದ್ದೆಷ್ಟು? ಚಿನ್ನ ದುಬಾರಿ: ಮಾ.21ರಂದು ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿ ದರ ಏರಿಕೆ ಆಗಿದ್ದೆಷ್ಟು?

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನ ಬೆಳ್ಳಿ ದರ

ಚಿನ್ನ ಬೆಳ್ಳಿ ದರ

ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

"ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಚಿನ್ನ ಮತ್ತು ಕಚ್ಚಾತೈಲದ ಬೆಲೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟವು ರಷ್ಯಾದ ಅತಿದೊಡ್ಡ ಬ್ಯಾಂಕ್‌ಗಳು ಮತ್ತು ಅದರ ಗಣ್ಯರ ಮೇಲೆ ನಿರ್ಬಂಧಗಳನ್ನು ವಿಧಿಸಿದೆ," ಶೇರ್‌ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ.

"ರಷ್ಯಾ ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಏರಿಕೆ ಕಂಡಿದೆ. ಜಾಗತಿಕ ಷೇರು ಮಾರುಕಟ್ಟೆಗಳಲ್ಲಿನ ಭಾರೀ ಮಾರಾಟ ಮತ್ತು ಅಂತರರಾಷ್ಟ್ರೀಯ ಕಚ್ಚಾ ತೈಲದ ದಾಖಲೆಯ ಏರಿಕೆಯ ನಡುವೆ ಎರಡೂ ಅಮೂಲ್ಯವಾದ ಲೋಹಗಳು ಏರಿಕೆ ಆಗಿದೆ. ನ್ನ ಮತ್ತು ಬೆಳ್ಳಿಯ ಬೆಲೆಗಳು ಪಾಸಿಟಿವ್‌ ರೂಪದಲ್ಲೇ ಉಳಿಯಲಿದೆ. ಬೆಲೆಗಳಲ್ಲಿನ ಯಾವುದೇ ಕುಸಿತವಾದರೆ ಅದು ಖರೀದಿ ಮಾಡಲು ಅವಕಾಶ," ಎಂದು ಮೆಹ್ತಾ ಇಕ್ವಿಟೀಸ್ ಲಿಮಿಟೆಡ್‌ನ ರಾಹುಲ್ ಕಲಾಂತ್ರಿ ಹೇಳಿದ್ದಾರೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮಾರ್ಚ್ 21: 47,400 ರೂ, 51,700 ರೂ

ಮಾರ್ಚ್ 20: 47,300 ರೂ, 51,600 ರೂ

ಮಾರ್ಚ್ 19: 47,300 ರೂ, 51,600 ರೂ

ಮಾರ್ಚ್ 18: 47,450 ರೂ, 51,770 ರೂ

ಮಾರ್ಚ್ 17: 47,450 ರೂ, 51,760 ರೂ

ಮಾರ್ಚ್ 16: 47,300 ರೂ, 51,600 ರೂ

ಮಾರ್ಚ್ 15: 47,600 ರೂ, 51,930 ರೂ

ಬೆಳ್ಳಿ ಬೆಲೆ ಕೆ.ಜಿಗೆ 72,600 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)

English summary
Gold, silver rate increased in India's major cities including Bengaluru, Chennai, Mumbai, Delhi on March 21, 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X