Infographics: ಮೇ 2ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ನವದೆಹಲಿ, ಮೇ 2: ದೇಶದಲ್ಲಿ ನಿರಂತರವಾಗಿ ಚಿನ್ನದ ಬೆಲೆಯು ಕುಸಿತ ಕಾಣುತ್ತಿದೆ. ಮೇ 2ರಂದು ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 1,190 ರೂಪಾಯಿ ಇಳಿಕೆ ಆಗಿದ್ದು 47,200 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,280 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ 51,510 ರೂಪಾಯಿ ಆಗಿದೆ. ಈ ನಡುವೆ ಬೆಳ್ಳಿ ಬೆಲೆಯು ಇಳಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ದರವು 800 ರೂಪಾಯಿ ಇಳಿಕೆ ಆಗಿದ್ದು, ಪ್ರಸ್ತುತ ಬೆಲೆ 62,700 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,510 ರೂ. ಇದೆ. ಚೆನ್ನೈನಲ್ಲಿ 48,550 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,970 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,200 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,510 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 47 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 51 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 2ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51112.00 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.65ರಷ್ಟು ಇಳಿಕೆಯಾಗಿ 1,885.56 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ0.47ರಷ್ಟು ಇಳಿಕೆಯಾಗಿದ್ದು, 22.69 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಏಪ್ರಿಲ್ 26: 48,450 ರೂ, 52,860 ರೂ
ಏಪ್ರಿಲ್ 25: 48,990 ರೂ, 53,440 ರೂ
ಬೆಳ್ಳಿ ಬೆಲೆ ಕೆ.ಜಿಗೆ 67,600 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ












Click it and Unblock the Notifications