Infographics: ಮೇ 4ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ನವದೆಹಲಿ, ಮೇ 4: ಭಾರತದಲ್ಲಿ ಅಕ್ಷಯ ತೃತೀಯ ದಿನಕ್ಕಿಂತ ಮೊದಲು ಕುಸಿತ ಕಂಡಿದ್ದ ಚಿನ್ನದ ಬೆಲೆ ಮಂಗಳವಾರ ಸ್ಥಿರತೆಯ್ನು ಕಾಯ್ದುಕೊಂಡಿತ್ತು. ಆದರೆ ಬುಧವಾರ ಮತ್ತೊಮ್ಮೆ ಚಿನ್ನ ಅಗ್ಗವಾಗಿದೆ.
ದೇಶದಲ್ಲಿ ಬುಧವಾರ ಚಿನ್ನದ ಬೆಲೆಯಲ್ಲಿ 200 ರೂಪಾಯಿ ಇಳಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,000 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 51,280 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 400 ರೂಪಾಯಿ ಏರಿಕೆಯಾಗಿದ್ದು, 62,700 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,000 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,280 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,000 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,280 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,000 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,280 ರೂ. ಇದೆ. ಚೆನ್ನೈನಲ್ಲಿ 48,100 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,320 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,000 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,280 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ.ನ ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 4ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 50719 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.08ರಷ್ಟು ಏರಿಕೆಯಾಗಿ 1,870.21 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.18ರಷ್ಟು ಏರಿಕೆಯಾಗಿದ್ದು, 22.64 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 4: 47,000 ರೂ, 51,280 ರೂ
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಏಪ್ರಿಲ್ 28: 48,000 ರೂ, 52,370 ರೂ
ಏಪ್ರಿಲ್ 27: 48,450 ರೂ, 52,860 ರೂ
ಬೆಳ್ಳಿ ಬೆಲೆ ಕೆ.ಜಿಗೆ 67,000 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
ಬೆಂಗಳೂರಿನ ಬಂಕ್ಗಳ ಮುಂದೆ ಕಿಲೋಮೀಟರ್ಗಟ್ಟಲೆ ಕ್ಯೂ: ಗ್ಯಾಸ್ ಇಲ್ಲದೆ ಕಂಗಾಲಾದ ಆಟೋ ಚಾಲಕರು -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ












Click it and Unblock the Notifications