Infographics: ಮೇ 5ರಂದು ದೇಶದಲ್ಲಿ ಚಿನ್ನ-ಬೆಳ್ಳಿ ದರ ಹೇಗಿದೆ?
ನವದೆಹಲಿ, ಮೇ 5: ಭಾರತದಲ್ಲಿ ಮೇಲಿಂದ ಮೇಲೆ ಕುಸಿತ ಕಂಡಿದ್ದ ಚಿನ್ನದ ಬೆಲೆ ಗುರುವಾರ ದುಬಾರಿಯಾಗಿದೆ. ದೇಶದಲ್ಲಿ ಗುರುವಾರ ಚಿನ್ನದ ಬೆಲೆಯಲ್ಲಿ 400 ರೂಪಾಯಿ ಏರಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,400 ರೂಪಾಯಿ ಆಗಿದೆ.
ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 51,700 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 400 ರೂಪಾಯಿ ಏರಿಕೆಯಾಗಿದ್ದು, 63,800 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,700 ರೂ. ಇದೆ. ಚೆನ್ನೈನಲ್ಲಿ 48,510 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,920 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,700 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ.
"ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.
ರಷ್ಯಾವು ಉಕ್ರೇನ್ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ.ನ ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 5ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51208 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.18ರಷ್ಟು ಏರಿಕೆಯಾಗಿ 1,897.56 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.10ರಷ್ಟು ಏರಿಕೆಯಾಗಿದ್ದು, 23.05 ಯುಎಸ್ ಡಾಲರ್ ಆಗಿದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮೇ 5: 47,400 ರೂ, 51,700 ರೂ
ಮೇ 4: 47,000 ರೂ, 51,280 ರೂ
ಮೇ 3: 47,200 ರೂ, 51,510 ರೂ
ಮೇ 2: 47,200 ರೂ, 51,510 ರೂ
ಮೇ 1: 48,390 ರೂ, 52,790 ರೂ
ಏಪ್ರಿಲ್ 30: 48,400 ರೂ, 52,800 ರೂ
ಏಪ್ರಿಲ್ 29: 48,550 ರೂ, 52,960 ರೂ
ಬೆಳ್ಳಿ ಬೆಲೆ ಕೆ.ಜಿಗೆ 67,700 ರೂಪಾಯಿ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ












Click it and Unblock the Notifications