ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಮೇ 9ರಂದು ದೇಶದಲ್ಲಿ ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?

|
Google Oneindia Kannada News

ನವದೆಹಲಿ, ಮೇ 9: ರಷ್ಯಾ- ಉಕ್ರೇನ್ ಯುದ್ಧ, ಡಾಲರ್ ವಿರುದ್ಧ ಭಾರತದ ಕರೆನ್ಸಿ ಮೌಲ್ಯ ಕುಸಿತದ ನಡುವೆ ಭಾರತದಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ 300 ರೂಪಾಯಿ ಇಳಿಕೆಯಾಗಿದ್ದ ಚಿನ್ನದ ಬೆಲೆಯು ಶನಿವಾರ 300 ರೂಪಾಯಿ ಏರಿಕೆಯಾಗಿತ್ತು. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 47,500 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 51,810 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ದರದಲ್ಲಿ 300 ರೂಪಾಯಿ ಇಳಿಕೆಯಾಗಿದ್ದು, 66,500 ರೂಪಾಯಿ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,810 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,810 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,810 ರೂ. ಇದೆ. ಚೆನ್ನೈನಲ್ಲಿ 48,870 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 53,300 ರೂಪಾಯಿ ಆಗಿದೆ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,810 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 49 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 53 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಮತ್ತು ಬೆಳ್ಳಿ ದರ ಎಷ್ಟು ದರ

ಚಿನ್ನ ಮತ್ತು ಬೆಳ್ಳಿ ದರ ಎಷ್ಟು ದರ

ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳ್ಳಿ ದರ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ

ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ

"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಚಿನ್ನ ದರ ಏರುಪೇರಾಗಿದೆ. ಹೂಡಿಕೆದಾರರು ಯುಎಸ್‌ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.

ಎಂಸಿಎಕ್ಸ್‌ನಲ್ಲಿ ಮೇ 9ರ ವಹಿವಾಟು

ಎಂಸಿಎಕ್ಸ್‌ನಲ್ಲಿ ಮೇ 9ರ ವಹಿವಾಟು

ರಷ್ಯಾವು ಉಕ್ರೇನ್‌ ಮೇಲೆ ದಾಳಿ ನಡೆಸಿದ್ದು, ಉಭಯ ರಾಷ್ಟ್ರಗಳ ನಡುವೆ ಯುದ್ಧ ನಡೆಯುತ್ತಿದೆ. ಈ ನಡುವೆ ಎಂಸಿಎಕ್ಸ್‌ನಲ್ಲಿ ಮೇ 9ರ ವಹಿವಾಟು ಫ್ಯೂಚರ್ ಗೋಲ್ಡ್ ಇಳಿಕೆಯಾಗಿದ್ದು, 51344 ರೂಪಾಯಿ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.51ರಷ್ಟು ಏರಿಕೆಯಾಗಿ 1,883.86 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.43ರಷ್ಟು ಇಳಿಕೆಯಾಗಿದ್ದು, 22.36 ಯುಎಸ್ ಡಾಲರ್ ಆಗಿದೆ.

ಚಿನ್ನದ ಬೆಲೆ

ಚಿನ್ನದ ಬೆಲೆ

ಚಿನ್ನದ ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮೇ 10: 47,500 ರೂ, 51,810 ರೂ
ಮೇ 9: 47,500 ರೂ, 51,810 ರೂ
ಮೇ 8: 47,500 ರೂ, 51,810 ರೂ

ಮೇ 7: 47,400 ರೂ, 51,710 ರೂ

ಮೇ 6: 47,100 ರೂ, 51,380 ರೂ

ಮೇ 5: 47,400 ರೂ, 51,700 ರೂ

ಮೇ 4: 47,000 ರೂ, 51,280 ರೂ

ಮೇ 3: 47,200 ರೂ, 51,510 ರೂ

ಮೇ 2: 47,200 ರೂ, 51,510 ರೂ

ಮೇ 1: 48,390 ರೂ, 52,790 ರೂ

ಏಪ್ರಿಲ್ 30: 48,400 ರೂ, 52,800 ರೂ

ಬೆಳ್ಳಿ ಬೆಲೆ ಕೆ.ಜಿಗೆ 66,500 ರೂಪಾಯಿ

English summary
Gold, silver rate increased in India's major cities including Bengaluru, Chennai, Mumbai, Delhi on May 9th, 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X