Infographics: ಅ.1ರಂದು ಬಂಗಾರ ದರದಲ್ಲಿ 150 ರೂ. ಇಳಿಕೆ
ನವದೆಹಲಿ, ಅಕ್ಟೋಬರ್ 01: ಭಾರತದಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 150 ರೂಪಾಯಿ ಇಳಿಕೆಯಾಗಿದ್ದು, 46,550 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 170 ರೂಪಾಯಿ ಇಳಿಕೆಯಾಗಿದ್ದು, 50,780 ರೂಪಾಯಿ ಆಗಿದೆ. ಬೆಳ್ಳಿ ದರವು ಸ್ಥಿರವಾಗಿದ್ದು, ಒಂದು ಕೆಜಿ ಬೆಳ್ಳಿಗೆ 62,000 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,550 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,780 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,500 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,730 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,650 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,890 ರೂ. ಇದೆ. ಚೆನ್ನೈನಲ್ಲಿ 46,900 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 51,160 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,500 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,730 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 46 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 50 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 01: 46,550 ರೂ, 50,780 ರೂ
ಸೆಪ್ಟೆಂಬರ್ 30: 46,700 ರೂ, 50,950 ರೂ
ಸೆಪ್ಟೆಂಬರ್ 29: 46,450 ರೂ, 50,670 ರೂ
ಸೆಪ್ಟೆಂಬರ್ 28: 45,860 ರೂ, 50,020 ರೂ
ಸೆಪ್ಟೆಂಬರ್ 27: 45,850 ರೂ, 50,020 ರೂ
ಸೆಪ್ಟೆಂಬರ್ 26: 46,050 ರೂ, 50,240 ರೂ
ಸೆಪ್ಟೆಂಬರ್ 25: 46,050 ರೂ, 50,240 ರೂ
ಸೆಪ್ಟೆಂಬರ್ 24: 46,050 ರೂ, 50,240 ರೂ
ಸೆಪ್ಟೆಂಬರ್ 23: 46,550 ರೂ, 50,780 ರೂ

ಚಿನ್ನದ ಬೆಲೆ ನಿರ್ಧಾರ
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
Adani Total Gas: ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಸಿಎನ್ಜಿ, ಪಿಎನ್ಜಿ ದರ ಸ್ಥಿರ: ಅದಾನಿ ಗ್ಯಾಸ್ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion












Click it and Unblock the Notifications