Infographics: ಅ.4ರಂದು ಚಿನ್ನದ ದರದಲ್ಲಿ 500 ರೂ. ಏರಿಕೆ
ನವದೆಹಲಿ, ಅಕ್ಟೋಬರ್ 04: ಭಾರತದಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಏರಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 500 ರೂಪಾಯಿ ಏರಿಕೆಯಾಗಿದ್ದು, 47,400 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 550 ರೂಪಾಯಿ ಏರಿಕೆಯಾಗಿದ್ದು, 51,710 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲಿ 4200 ರೂಪಾಯಿ ಏರಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 66,700 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,710 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,660 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,820 ರೂ. ಇದೆ. ಚೆನ್ನೈನಲ್ಲಿ 47,750 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,100 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,660 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 46 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 50 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 04: 47,750 ರೂ, 52,100 ರೂ
ಅಕ್ಟೋಬರ್ 03: 46,900 ರೂ, 51,160 ರೂ
ಅಕ್ಟೋಬರ್ 02: 46,550 ರೂ, 50,780 ರೂ
ಅಕ್ಟೋಬರ್ 01: 46,550 ರೂ, 50,780 ರೂ
ಸೆಪ್ಟೆಂಬರ್ 30: 46,700 ರೂ, 50,950 ರೂ
ಸೆಪ್ಟೆಂಬರ್ 29: 46,450 ರೂ, 50,670 ರೂ
ಸೆಪ್ಟೆಂಬರ್ 28: 45,860 ರೂ, 50,020 ರೂ

ಚಿನ್ನದ ಬೆಲೆ ನಿರ್ಧಾರ
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion












Click it and Unblock the Notifications