Infographics: ಸೆ.28ರಂದು ಬದಲಾಗಿಲ್ಲ ಬಂಗಾರ-ಬೆಳ್ಳಿ ಬೆಲೆ!
ನವದೆಹಲಿ, ಸೆಪ್ಟೆಂಬರ್ 28: ಭಾರತದಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 10 ರೂಪಾಯಿ ಏರಿಕೆಯಾಗಿದ್ದು, 45,860 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಿಲ್ಲದೇ 50,020 ರೂಪಾಯಿಗೆ ಸ್ಥಿರವಾಗಿದೆ. ಬೆಳ್ಳಿ ದರದಲ್ಲೂ 700 ರೂಪಾಯಿ ಇಳಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 60,000 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,860 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,020 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,970 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,950 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,130 ರೂ. ಇದೆ. ಚೆನ್ನೈನಲ್ಲಿ 46,250 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 50,450 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,800 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,970 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 46 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 50 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 26: 45,860 ರೂ, 50,020 ರೂ
ಸೆಪ್ಟೆಂಬರ್ 26: 45,850 ರೂ, 50,020 ರೂ
ಸೆಪ್ಟೆಂಬರ್ 26: 46,050 ರೂ, 50,240 ರೂ
ಸೆಪ್ಟೆಂಬರ್ 25: 46,050 ರೂ, 50,240 ರೂ
ಸೆಪ್ಟೆಂಬರ್ 24: 46,050 ರೂ, 50,240 ರೂ
ಸೆಪ್ಟೆಂಬರ್ 23: 46,550 ರೂ, 50,780 ರೂ
ಸೆಪ್ಟೆಂಬರ್ 22: 46,050 ರೂ, 50,240 ರೂ

ಚಿನ್ನದ ಬೆಲೆ ನಿರ್ಧಾರ
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ?: ಇಲ್ಲಿದೆ ಮಾರ್ಚ್ 17ರ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್












Click it and Unblock the Notifications