Infographics: ಸೆ.29ರಂದು ಬೆಳ್ಳಿ ದರದಲ್ಲಿ 3600 ರೂ. ಇಳಿಕೆ
ನವದೆಹಲಿ, ಸೆಪ್ಟೆಂಬರ್ 29: ಭಾರತದಲ್ಲಿ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ ಕಂಡು ಬಂದಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 590 ರೂಪಾಯಿ ಏರಿಕೆಯಾಗಿದ್ದು, 46,450 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 650 ರೂಪಾಯಿ ಏರಿಕೆಯಾಗಿದ್ದು, 50,670 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲೂ 3600 ರೂಪಾಯಿ ಇಳಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 56,400 ರೂಪಾಯಿ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,450 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,670 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,620 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,550 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,620 ರೂ. ಇದೆ. ಚೆನ್ನೈನಲ್ಲಿ 46,800 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 51,050 ರೂಪಾಯಿ ಆಗಿದೆ.
ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,620 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ 46 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 50 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಅನಿಶ್ಚಿತತೆಯ ನಡುವೆ ಚಿನ್ನವು ಹೆಚ್ಚು ಮಾರಾಟವಾಗುತ್ತಿದೆ. ಮಾರುಕಟ್ಟೆಗಳಲ್ಲಿ ಪ್ರಾಬಲ್ಯ ಸಾಧಿಸುವವರೆಗೆ, ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆಯ ಸಾಧ್ಯತೆ ಇದೆ. ನಾವು ಹೂಡಿಕೆ ಮಾಡಲು ಇದು ಉತ್ತಮ ಅವಕಾಶ," ಎಂದು ಶೇರ್ ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ಡಾಲರ್ ಬಲಗೊಂಡ ಬಳಿಕ ಗುರುವಾರ ಚಿನ್ನ ಕಡಿಮೆಯಾಯಿತು. ಹೂಡಿಕೆದಾರರು ಯುಎಸ್ ಬಡ್ಡಿದರ ಹೆಚ್ಚಳಕ್ಕೆ ಸಜ್ಜಾಗುತ್ತಿದ್ದಂತೆ ಚಿನ್ನ ಹೆಚ್ಚಳವಾಗಿದೆ," ಎಂದು ಮೆಹ್ತಾ ಈಕ್ವಿಟೀಸ್‌ನ ರಾಹುಲ್ ಕಲಂತ್ರಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಸೆಪ್ಟೆಂಬರ್ 29: 46,450 ರೂ, 50,670 ರೂ
ಸೆಪ್ಟೆಂಬರ್ 28: 45,860 ರೂ, 50,020 ರೂ
ಸೆಪ್ಟೆಂಬರ್ 27: 45,850 ರೂ, 50,020 ರೂ
ಸೆಪ್ಟೆಂಬರ್ 26: 46,050 ರೂ, 50,240 ರೂ
ಸೆಪ್ಟೆಂಬರ್ 25: 46,050 ರೂ, 50,240 ರೂ
ಸೆಪ್ಟೆಂಬರ್ 24: 46,050 ರೂ, 50,240 ರೂ
ಸೆಪ್ಟೆಂಬರ್ 23: 46,550 ರೂ, 50,780 ರೂ

ಚಿನ್ನದ ಬೆಲೆ ನಿರ್ಧಾರ
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ










Click it and Unblock the Notifications