ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಮಾರ್ಚ್ 14ರಂದು ದೇಶದಲ್ಲಿ ಹೇಗಿದೆ ಚಿನ್ನದ ದರ?

|
Google Oneindia Kannada News

ನವದೆಹಲಿ, ಮಾರ್ಚ್ 14: ದೇಶದ ಹಲವೆಡೆ ಕೊರೊನಾ ವೈರಸ್‌ ಹಿನ್ನೆಲೆ ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ಬೆಲೆಯಲ್ಲಿನ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರಲ್ಲೂ ಏರಿಳಿತ ಮುಂದುವರಿದಿದೆ. ಇಂದು ಚಿನ್ನದ ಬೆಲೆಯು ಏರಿಕೆ ಕಂಡು ಬಂದಿದ್ದು, ಮಾರ್ಚ್ 14ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂಗೆ ಹಾಗೂ ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟಿದೆ ಎಂಬುದನ್ನು ಈ ವರದಿಯಲ್ಲಿ ತಿಳಿಯೋಣ.

ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ನಡುವೆ ಎಂಸಿಎಕ್ಸ್‌ನಲ್ಲಿ ಮಾರ್ಚ್ 14ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 52619.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.00ರಷ್ಟು ಕುಗ್ಗಿ1,974.16 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.46 ರಷ್ಟು ಇಳಿಕೆಯಾಗಿ 25.68 ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,100 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,470 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,100 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,470 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,100 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,470 ರೂ. ಇದೆ. ಚೆನ್ನೈನಲ್ಲಿ 48,850 ರೂ. ಹಾಗೂ ಅಪರಂಜಿ 53,290 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ದೇಶದ ಪ್ರಮುಖ ನಗರಗಳಲ್ಲಿ ಮಾ.13ರ ಚಿನ್ನ, ಬೆಳ್ಳಿ ದರ ತಿಳಿಯಿರಿದೇಶದ ಪ್ರಮುಖ ನಗರಗಳಲ್ಲಿ ಮಾ.13ರ ಚಿನ್ನ, ಬೆಳ್ಳಿ ದರ ತಿಳಿಯಿರಿ

ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,100 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,470 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 46 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನ ಬೆಳ್ಳಿ ದರ

ಚಿನ್ನ ಬೆಳ್ಳಿ ದರ

ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಚಿನ್ನ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

"ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಚಿನ್ನ ಮತ್ತು ಕಚ್ಚಾತೈಲದ ಬೆಲೆಯಲ್ಲಿ ಹೆಚ್ಚಳ ಕಂಡು ಬರುತ್ತಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟವು ರಷ್ಯಾದ ಅತಿದೊಡ್ಡ ಬ್ಯಾಂಕ್‌ಗಳು ಮತ್ತು ಅದರ ಗಣ್ಯರ ಮೇಲೆ ನಿರ್ಬಂಧಗಳನ್ನು ವಿಧಿಸಿದೆ," ಶೇರ್‌ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ.

"ರಷ್ಯಾ ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಏರಿಕೆ ಕಂಡಿದೆ. ಜಾಗತಿಕ ಷೇರು ಮಾರುಕಟ್ಟೆಗಳಲ್ಲಿನ ಭಾರೀ ಮಾರಾಟ ಮತ್ತು ಅಂತರರಾಷ್ಟ್ರೀಯ ಕಚ್ಚಾ ತೈಲದ ದಾಖಲೆಯ ಏರಿಕೆಯ ನಡುವೆ ಎರಡೂ ಅಮೂಲ್ಯವಾದ ಲೋಹಗಳು ಏರಿಕೆ ಆಗಿದೆ. ನ್ನ ಮತ್ತು ಬೆಳ್ಳಿಯ ಬೆಲೆಗಳು ಪಾಸಿಟಿವ್‌ ರೂಪದಲ್ಲೇ ಉಳಿಯಲಿದೆ. ಬೆಲೆಗಳಲ್ಲಿನ ಯಾವುದೇ ಕುಸಿತವಾದರೆ ಅದು ಖರೀದಿ ಮಾಡಲು ಅವಕಾಶ," ಎಂದು ಮೆಹ್ತಾ ಇಕ್ವಿಟೀಸ್ ಲಿಮಿಟೆಡ್‌ನ ರಾಹುಲ್ ಕಲಾಂತ್ರಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ

ಬೆಂಗಳೂರಿನಲ್ಲಿ ಚಿನ್ನದ ದರ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಮಾರ್ಚ್ 14: 48,100 ರೂ, 52,470 ರೂ

ಮಾರ್ಚ್ 13: 48,410 ರೂ, 52,810 ರೂ

ಮಾರ್ಚ್ 12: 48,200 ರೂ, 52,580 ರೂ

ಮಾರ್ಚ್ 11: 48,200 ರೂ, 52,580 ರೂ

ಮಾರ್ಚ್ 10: 48,200 ರೂ, 52,580 ರೂ

ಮಾರ್ಚ್ 09: 50,700 ರೂ, 55,310 ರೂ

ಮಾರ್ಚ್ 08: 49,400 ರೂ, 53,890 ರೂ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)

English summary
Gold, silver rate increased in India's major cities including Bengaluru, Chennai, Mumbai, Delhi on March 14, 2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X