Infographics: ಡಿ.23ರಂದು ಚಿನ್ನದ ದರ ಎಷ್ಟು ಏರಿಕೆ?

ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಡಿಸೆಂಬರ್ 23ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್ ನಲ್ಲಿ ಡಿಸೆಂಬರ್ 23ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,198ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 62,208ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ -9ಇಳಿಕೆಯಾಗಿ 1,790ಯುಎಸ್ ಡಾಲರ್‌ನಷ್ಟಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,350ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,480ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,300ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,300ರೂ. ಇದೆ.

ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,500 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,800ರೂ. ಇದೆ. ಚೆನ್ನೈನಲ್ಲಿ45,560ರೂ. ಹಾಗೂ ಅಪರಂಜಿ49,700ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

 ಚಿನ್ನದ ಮೌಲ್ಯ ಏರಿಳಿತ

ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 48,700ರು ನಂತೆ ಬಿಡ್ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ 0.01%ರಷ್ಟು ಏರಿಕೆ ಕಂಡಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

 ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಹೊಸ ರೂಪಾಂತರ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

 ಬೆಂಗಳೂರಿನಲ್ಲಿ ಚಿನ್ನದ ದರ

ಬೆಂಗಳೂರಿನಲ್ಲಿ ಚಿನ್ನದ ದರ

ಡಿಸೆಂಬರ್ 23:4,350 ರೂ, 49,480 ರೂ
ಡಿಸೆಂಬರ್ 22:45,150 ರೂ, 49,260 ರೂ
ಡಿಸೆಂಬರ್ 21:45,300ರೂ, 49,420 ರೂ
ಡಿಸೆಂಬರ್ 20:45,700ರೂ, 49,850 ರೂ(-)
ಡಿಸೆಂಬರ್ 19: 45,700ರೂ, 49,850 ರೂ
ಡಿಸೆಂಬರ್ 18:45,700ರೂ, 49,850 ರೂ(-_
ಡಿಸೆಂಬರ್ 17:45,700ರೂ, 49,850 ರೂ
ಡಿಸೆಂಬರ್ 16:45,300ರೂ, 49,420 ರೂ

 ಚಿನ್ನದ ಬೆಲೆ

ಚಿನ್ನದ ಬೆಲೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+