Infographics: ಫೆಬ್ರವರಿ 8ರಂದು ಚಿನ್ನದ ದರ ಎಷ್ಟಿದೆ?
ದೇಶದ ಹಲವೆಡೆ ಕೊರೊನಾ ವೈರಸ್ ಹಿನ್ನೆಲೆ ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಫೆಬ್ರವರಿ 8ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 8ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48407.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.99ರಷ್ಟು ಏರಿಕೆಯಾಗಿ 1,825.88 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 2.82ರಷ್ಟು ಏರಿಕೆಯಾಗಿ 23.17 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,530 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,260 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,530 ರೂ. ಇದೆ. ಚೆನ್ನೈನಲ್ಲಿ 45,590 ರೂ. ಹಾಗೂ ಅಪರಂಜಿ 49,740 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,530 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ಎಂಸಿಎಕ್ಸ್‌ನಲ್ಲಿ ಚಿನ್ನದ ಬೆಲೆಗಳು ಲಾಭದಲ್ಲಿ ಹೆಚ್ಚಳ ತೋರಿಸಿದೆ. ಯುಎಸ್ ಡಾಲರ್ ಚಿನ್ನದ ಬೆಲೆಗಳ ಮೇಲೆ ಹೆಚ್ಚಿನ ಪ್ರಭಾವ ಬೀರುತ್ತದೆ. ಫೆಡರಲ್ ರಿಸರ್ವ್ ದರ ಏರಿಕೆ ನಿರ್ಧಾರ ಮತ್ತು ಹೆಚ್ಚಿನ ಹಣದುಬ್ಬರವು ಚಿನ್ನದ ಬೆಲೆಗಳನ್ನು ಹೆಚ್ಚಿಸುವ ಪ್ರಮುಖ ಅಂಶಗಳಾಗಿವೆ," ಎಂದು ಶೇರ್‌ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 08: 45,400 ರೂ, 49,530 ರೂ
ಫೆಬ್ರವರಿ 07: 45,200 ರೂ, 49,300 ರೂ
ಫೆಬ್ರವರಿ 06: 45,100 ರೂ, 49,280 ರೂ
ಫೆಬ್ರವರಿ 05: 45,100 ರೂ, 49,280 ರೂ
ಫೆಬ್ರವರಿ 04: 45,100 ರೂ, 49,280 ರೂ
ಫೆಬ್ರವರಿ 03: 45,100 ರೂ, 49,280 ರೂ
ಫೆಬ್ರವರಿ 02: 44,900 ರೂ, 48,980 ರೂ
ಫೆಬ್ರವರಿ 01:44,900 ರೂ, 48,980 ರೂ
ಜನವರಿ 31: 44,900 ರೂ, 48,990 ರೂ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)












Click it and Unblock the Notifications