Infographics: ಫೆಬ್ರವರಿ16 ರಂದು ಚಿನ್ನದ ದರ ಎಷ್ಟಿದೆ?

ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ.

ಫೆಬ್ರವರಿ16 ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್‌ನಲ್ಲಿ ಫೆಬ್ರವರಿ 16ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 49333.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 1.30ರಷ್ಟು ಏರಿಕೆಯಾಗಿ 1,855.41 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.13ರಷ್ಟು ಏರಿಕೆಯಾಗಿ 23.48 ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,200 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,400 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,400 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,200 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 50,400 ರೂ. ಇದೆ. ಚೆನ್ನೈನಲ್ಲಿ 46,650 ರೂ. ಹಾಗೂ ಅಪರಂಜಿ 50,850 ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಚಿನ್ನ ಬೆಳ್ಳಿ ದರ

ಚಿನ್ನ ಬೆಳ್ಳಿ ದರ

ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ.
ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಹೊಸ ರೂಪಾಂತರ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ

ಬೆಂಗಳೂರಿನಲ್ಲಿ ಚಿನ್ನದ ದರ

ಬೆಂಗಳೂರು ಚಿನ್ನದ ಮೌಲ್ಯ
ನಗರ: ಬೆಂಗಳೂರು
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400

ಬೆಳ್ಳಿ ದರ: ರೂ.67,800

ನಗರ: ಮೈಸೂರು
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400

ಬೆಳ್ಳಿ ದರ: ರೂ.67,800

ನಗರ: ಮಂಗಳೂರು
22 ಕ್ಯಾರೆಟ್ ಚಿನ್ನ ರೂ. 46,200
24 ಕ್ಯಾರೆಟ್ ಚಿನ್ನ ರೂ. 50,400

ಬೆಳ್ಳಿ ದರ: ರೂ.67,800

ಚಿನ್ನದ ಬೆಲೆ

ಚಿನ್ನದ ಬೆಲೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+