Infographics: ಉಕ್ರೇನ್-ರಷ್ಯಾ ಯುದ್ಧದ ನಡುವೆ ಫೆ. 25ರಂದು ಚಿನ್ನದ ದರ ಹೇಗಿದೆ?
ನವದೆಹಲಿ, ಫೆಬ್ರವರಿ 25: ದೇಶದ ಹಲವೆಡೆ ಕೊರೊನಾ ವೈರಸ್ ಹಿನ್ನೆಲೆ ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಈ ನಡುವೆ ರಷ್ಯಾ-ಉಕ್ರೇನ್ ನಡುವೆ ಯುದ್ಧ ಆರಂಭವಾಗಿದೆ. ನಿನ್ನೆ ಚಿನ್ನದ ಬೆಲೆಯು ಏರಿಕೆ ಕಂಡಿದೆ. ಆದರೆ ಇಂದು ಇಳಿಕೆ ಕಂಡಿದೆ. ಏರಿಕೆ ಆಗುವ ಸಾಧ್ಯತೆಗಳು ಇದೆ ಎಂದು ತಜ್ಞರು ಹೇಳಿದ್ದರು. ಫೆಬ್ರವರಿ 25ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಫೆಬ್ರವರಿ 25ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಕುಗ್ಗಿ 50241.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.84ರಷ್ಟು ಇಳಿಕೆಯಾಗಿ 1,886.91 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.75ರಷ್ಟು ಇಳಿಕೆಯಾಗಿ 24.01 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,110 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,110 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,260 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,110 ರೂ. ಇದೆ. ಚೆನ್ನೈನಲ್ಲಿ 48,010 ರೂ. ಹಾಗೂ ಅಪರಂಜಿ 52,370 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,110 ರು ಇದೆ.ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ರಷ್ಯಾ-ಉಕ್ರೇನ್ ಯುದ್ಧದ ನಡುವೆ ಚಿನ್ನವು ಏರಿಕೆ ಕಂಡಿದೆ. ಸಮಸ್ಯೆಯನ್ನು ಬಗೆಹರಿಸಲು ಗಂಭೀರ ಪ್ರಯತ್ನ ನಡೆಯದಿದ್ದರೆ ಖರೀದಿಯ ಮೇಲೆ ಪರಿಣಾಮ ಬೀರಲಿದೆ," ಎಂದು ಕೋಟಾಕ್ ಸೆಕ್ಯುರಿಟೀಸ್‌ನಲ್ಲಿ ಮುಖ್ಯ ಸಂಶೋಧಕರಾದ ರವೀಂದ್ರ ರಾವ್ ತಿಳಿಸಿದ್ದಾರೆ. ಇನ್ನು ಉಕ್ರೇನ್ ಹಾಗೂ ರಷ್ಯಾ ಯುದ್ಧದಿಂದಾಗಿ ಚಿನ್ನದ ಬೆಲೆ ಅಧಿಕವಾಗುವ ಸಾಧ್ಯತೆ ಇದೆ ಎಂದು ಹಲವಾರು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್, "ಎಂಸಿಎಕ್ಸ್ ಗೋಲ್ಡ್ ಬೆಲೆಗಳು 2.25 ಶೇಕಡಾ ಏರಿಕೆಯಾಗಿ 10 ಗ್ರಾಂಗೆ 51,500 ರೂ ಆಗಿದೆ," ಎಂದಿದ್ದಾರೆ. ಚಿನ್ನದ ಬೆಲೆ ಮುಂದಿನ ವರ್ಷದಲ್ಲಿ 62,000 ಕ್ಕೆ ತಲುಪುವ ನಿರೀಕ್ಷೆಯಿದೆ ಎಂದು ತಜ್ಞರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಫೆಬ್ರವರಿ 25: 46,850 ರೂ, 51,110 ರೂ
ಫೆಬ್ರವರಿ 24: 46,850 ರೂ, 51,110 ರೂ
ಫೆಬ್ರವರಿ 23: 46,000 ರೂ, 50,180 ರೂ
ಫೆಬ್ರವರಿ 22: 46,250 ರೂ, 50,460 ರೂ
ಫೆಬ್ರವರಿ 21: 45,900 ರೂ, 50,050 ರೂ
ಫೆಬ್ರವರಿ 20: 45,990 ರೂ, 50,180 ರೂ
ಫೆಬ್ರವರಿ 19: 46,000 ರೂ, 50,190 ರೂ
ಫೆಬ್ರವರಿ 18: 46,300 ರೂ, 50,510 ರೂ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)
-
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ -
LPG: ಎಲ್ಪಿಜಿ ಹೆಚ್ಚಿನ ದರಕ್ಕೆ ಮಾರಿದರೆ ಕಂಪನಿಗಳಿಗೆ ಬೀಗ: ಸಚಿವ ಕೆ.ಎಚ್.ಮುನಿಯಪ್ಪ ಖಡಕ್ ಎಚ್ಚರಿಕೆ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಏರಿಕೆ: ಇಲ್ಲಿದೆ ಏಪ್ರಿಲ್ 9ರ ದರಪಟ್ಟಿ -
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಏಪ್ರಿಲ್ 09ರ ದರಪಟ್ಟಿ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್











Click it and Unblock the Notifications