Infographics: ಜನವರಿ 19ರಂದು ಚಿನ್ನದ ದರ ಎಷ್ಟಿದೆ?
ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ.
ಜನವರಿ 19 ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್ನಲ್ಲಿ ಜನವರಿ 19 ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,966ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು63,549ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ)ಗೆ ಶೇ+2.79ಏರಿಕೆಯಾಗಿ 1,817.27ಯುಎಸ್ ಡಾಲರ್ನಷ್ಟಿದೆ.
ಕೋಲ್ಕತ್ತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ 47,400ರೂಪಾಯಿ ಹಾಗೂ 24 ಕ್ಯಾರೆಟ್ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,100 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಆರಂಭಗೊಳ್ಳಲಿದೆ. 2022ನೇ ಸಾಲಿನ ಕೇಂದ್ರ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಅಧಿವೇಶನದ ಎರಡನೇ ಭಾಗವು ಮಾರ್ಚ್ 14 ರಂದು ಪ್ರಾರಂಭವಾಗಿ ಏಪ್ರಿಲ್ 8 ರವರೆಗೆ ಇರುತ್ತದೆ. ಈ ಕುರಿತು ಸರ್ಕಾರ ಮಾಹಿತಿ ನೀಡಿದ್ದು, ಸಂಸತ್ತಿನ ಬಜೆಟ್ ಅಧಿವೇಶನಕ್ಕಾಗಿ ಜನವರಿ 31 ರಂದು ಸಭೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು 2022-23ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ.
ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಹೊಸ ರೂಪಾಂತರ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಜನವರಿ 19: 45,100 ರೂ, 45,100 ರೂ
ಜನವರಿ 18: 44,970 ರೂ, 49,090 ರೂ
ಜನವರಿ 17: 44,990 ರೂ, 49,090 ರೂ
ಜನವರಿ 16: 44,990 ರೂ, 49,090 ರೂ
ಜನವರಿ 15: 45,000 ರೂ, 49,100 ರೂ
ಜನವರಿ 14: 45,010 ರೂ 49,010 ರೂ
ಜನವರಿ 13: 45,000 ರೂ, 49,100 ರೂ
ಜನವರಿ 12: 44,800 ರೂ, 48,880ರೂ,
ಬೆಳ್ಳಿ ಬೆಲೆ ಕೆ.ಜಿಗೆ 66,000 ರೂಪಾಯಿ

ಚಿನ್ನದ ಬೆಲೆ
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು