Infographics: ಮಾರ್ಚ್ 8ರಂದು ಚಿನ್ನದ ದರ ಹೀಗಿದೆ

ನವದೆಹಲಿ, ಮಾರ್ಚ್ 08: ದೇಶದ ಹಲವೆಡೆ ಕೊರೊನಾ ವೈರಸ್‌ ಹಿನ್ನೆಲೆ ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಈ ನಡುವೆ ರಷ್ಯಾ-ಉಕ್ರೇನ್‌ ನಡುವೆ ಯುದ್ಧ ಆರಂಭವಾಗಿದೆ. ಇಂದು ಚಿನ್ನದ ಬೆಲೆಯು ಸ್ಥಿರವಾಗಿದೆ. ಆದರೆ ಬೆಲೆಯು ಏರಿಕೆ ಆಗುವ ಸಾಧ್ಯತೆಗಳು ಇದೆ ಎಂದು ತಜ್ಞರು ಹೇಳಿದ್ದಾರೆ. ಮಾರ್ಚ್ 8ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್‌ನಲ್ಲಿ ಮಾರ್ಚ್ 8ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 53950.00ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ0.53ರಷ್ಟು ಏರಿಕೆಯಾಗಿ 2,009.27 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.69ರಷ್ಟು ಏರಿಕೆಯಾಗಿ 26.09 ಯುಎಸ್ ಡಾಲರ್ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,400 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,890 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,400 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,890 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,400 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 53,890 ರೂ. ಇದೆ. ಚೆನ್ನೈನಲ್ಲಿ 50,200 ರೂ. ಹಾಗೂ ಅಪರಂಜಿ 54,760 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 49,400 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 53,890 ರು ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 45 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

 ಚಿನ್ನ ಬೆಳ್ಳಿ ದರ

ಚಿನ್ನ ಬೆಳ್ಳಿ ದರ

ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

 ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

"ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಿಂದಾಗಿ ಚಿನ್ನ ಮತ್ತು ಕಚ್ಚಾ ತೈಲದ ಬೆಲೆಯಲ್ಲಿ ಹೆಚ್ಚಳ ಕಂಡುಬರುತ್ತಿದೆ. ಯುಎಸ್ ಮತ್ತು ಯುರೋಪಿಯನ್ ಒಕ್ಕೂಟವು ರಷ್ಯಾದ ಅತಿದೊಡ್ಡ ಬ್ಯಾಂಕ್‌ಗಳು ಮತ್ತು ಅದರ ಗಣ್ಯರ ಮೇಲೆ ನಿರ್ಬಂಧಗಳನ್ನು ವಿಧಿಸಿದೆ," ಶೇರ್‌ಇಂಡಿಯಾದ ಉಪಾಧ್ಯಕ್ಷ ಮತ್ತು ಸಂಶೋಧನಾ ಮುಖ್ಯಸ್ಥ ರವಿ ಸಿಂಗ್ ಹೇಳಿದ್ದಾರೆ. "ರಷ್ಯಾ ಉಕ್ರೇನ್‌ ಯುದ್ಧ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಏರಿಕೆ ಕಂಡಿದೆ. ಜಾಗತಿಕ ಷೇರು ಮಾರುಕಟ್ಟೆಗಳಲ್ಲಿನ ಭಾರೀ ಮಾರಾಟ ಮತ್ತು ಅಂತರರಾಷ್ಟ್ರೀಯ ಕಚ್ಚಾ ತೈಲದ ದಾಖಲೆಯ ಏರಿಕೆಯ ನಡುವೆ ಎರಡೂ ಅಮೂಲ್ಯವಾದ ಲೋಹಗಳು ಏರಿಕೆ ಆಗಿದೆ. ನ್ನ ಮತ್ತು ಬೆಳ್ಳಿಯ ಬೆಲೆಗಳು ಪಾಸಿಟಿವ್‌ ರೂಪದಲ್ಲೇ ಉಳಿಯಲಿದೆ. ಬೆಲೆಗಳಲ್ಲಿನ ಯಾವುದೇ ಕುಸಿತವಾದರೆ ಅದು ಖರೀದಿ ಮಾಡಲು ಅವಕಾಶ," ಎಂದು ಮೆಹ್ತಾ ಇಕ್ವಿಟೀಸ್ ಲಿಮಿಟೆಡ್‌ನ ರಾಹುಲ್ ಕಲಾಂತ್ರಿ ಹೇಳಿದ್ದಾರೆ.

 ಬೆಂಗಳೂರಿನಲ್ಲಿ ಚಿನ್ನದ ದರ

ಬೆಂಗಳೂರಿನಲ್ಲಿ ಚಿನ್ನದ ದರ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 08: 49,400 ರೂ, 53,890 ರೂ
ಮಾರ್ಚ್ 07: 48,400 ರೂ, 52,800 ರೂ
ಮಾರ್ಚ್ 06: 48,400 ರೂ, 52,800 ರೂ
ಮಾರ್ಚ್ 05: 48,400 ರೂ, 52,800 ರೂ
ಮಾರ್ಚ್ 04: 47,700 ರೂ, 52,040 ರೂ
ಮಾರ್ಚ್ 03: 47,300 ರೂ, 51,600 ರೂ
ಮಾರ್ಚ್ 02: 47,700 ರೂ, 52,040 ರೂ
ಮಾರ್ಚ್ 01: 46,700 ರೂ, 50,950 ರೂ
ಫೆಬ್ರವರಿ 28: 47,000 ರೂ, 51,280 ರೂ
ಫೆಬ್ರವರಿ 27: 46,340 ರೂ, 50,560 ರೂ

 ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+