Infographics: ಮಾರ್ಚ್ 23ರಂದು ಚಿನ್ನದ ದರ ಹೀಗಿದೆ
ನವದೆಹಲಿ, ಮಾರ್ಚ್ 23: ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರಗಳ ಸೃಷ್ಟಿ, ಉಕ್ರೇನ್ ಹಾಗೂ ರಷ್ಯಾ ಯುದ್ಧದ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಇಂದು ಚಿನ್ನದ ಬೆಲೆಯು ಇಳಿಕೆ ಕಂಡಿದೆ. ಮಾರ್ಚ್ 23 ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಇಳಿಕೆ ಕಂಡಿದೆ. ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಮಾರ್ಚ್ 23ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 51655.00 ರು ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ0.71ರಷ್ಟು ಏರಿಕೆಯಾಗಿ 1,933.29 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.26ರಷ್ಟು ಏರಿಕೆಯಾಗಿ 25.08 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,670 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,670 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 51,670 ರೂ. ಇದೆ. ಚೆನ್ನೈನಲ್ಲಿ 47,810 ರೂ. ಹಾಗೂ ಅಪರಂಜಿ 52,160 ರು ಪ್ರತಿ 10 ಗ್ರಾಂಗೆ ಬೆಲೆ ಇದೆ. ಕೋಲ್ಕತ್ತದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,350 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 51,670 ರು ಇದೆ. ಇದೇ ರೀತಿ ಚಂಡೀಗಢ, ಸೂರತ್, ನಾಸಿಕ್‌ನಲ್ಲೂ ಹೆಚ್ಚೂ ಕಡಿಮೆ 47 ಸಾವಿರದಿಂದ 51 ಸಾವಿರದ ಆಸುಪಾಸಿನಲ್ಲೇ ಇದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 44 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನ ಬೆಳ್ಳಿ ದರ
ಬೆಳಗ್ಗೆ ವೇಳೆಗೆ ದೇಶದ ಕೆಲವು ಪ್ರಮುಖ ಮಹಾನಗರಗಳಲ್ಲಿ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದರೆ ಬೆಳ್ಳಿ ಬೆಲೆಯಲ್ಲಿಯೂ ಕೆಲವು ಕಡೆಗಳಲ್ಲಿ ಏರಿಕೆ ಕಂಡು ಬಂದು ಉಳಿದೆಡೆ ಏಕರೂಪವಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ಆಯಾ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ. ನಿಮ್ಮ ನಗರಗಳಲ್ಲಿ ಇಂದಿನ ದಿನ ಚಿನ್ನ ಮತ್ತು ಬೆಳಿಗೆ ಎಷ್ಟು ದರ ಇವೆ ಅನ್ನೋದನ್ನು ಇಲ್ಲಿ ನೀವು ಪ್ರತಿ ದಿನ ತಿಳಿದುಕೊಳ್ಳಬಹುದು.

ಚಿನ್ನದ ಏರಿಳಿತಕ್ಕೆ ಕಾರಣ
"ಯುಎಸ್‌ನ ಆರ್ಥಿಕ ಸ್ಥಿತಿಯು ಅಮೂಲ್ಯವಾದ ಲೋಹಗಳ ಮಾರುಕಟ್ಟೆಗಳ ಮೇಲೆ ಒತ್ತಡವನ್ನುಂಟುಮಾಡುತ್ತಿದೆ. ಹಾಗೆಯೇ ಯುಎಸ್ ಸ್ಟಾಕ್ ಸೂಚ್ಯಂಕಗಳಲ್ಲಿನ ಇತ್ತೀಚಿನ ಬದಲಾವಣೆಗಳು ಕೂಡಾ ಚಿನ್ನದ ಬೆಲೆಯ ಮೇಲೆ ಪ್ರಭಾವ ಬೀರುತ್ತಿದೆ. ಯುನೈಟೆಡ್ ಸ್ಟೇಟ್ಸ್‌ನಲ್ಲಿ ಬೆಂಚ್ಮಾರ್ಕ್ 10 ವರ್ಷದ ಬಾಂಡ್ ಇಳುವರಿಯು ಮೇ ನಂತರ ಮೊದಲ ಬಾರಿಗೆ 2.40 ಶೇಕಡಾವನ್ನು ದಾಟಿದೆ. ರಷ್ಯಾ-ಉಕ್ರೇನ್ ಯುದ್ಧದ ಪರಿಸ್ಥಿತಿಯು ಇತ್ತೀಚೆಗೆ ಬದಲಾಗಿಲ್ಲ, ಆದ್ದರಿಂದ ಮಾರುಕಟ್ಟೆಯಲ್ಲಿ ಅಪಾಯವು ಸ್ವಲ್ಪಮಟ್ಟಿಗೆ ಹೆಚ್ಚಾಗಿಯೇ ಇದೆ," ಎಂದು ಮೆಹ್ತಾ ಈಕ್ವಿಟೀಸ್ ಲಿಮಿಟೆಡ್‌ನ ರಾಹುಲ್ ಕಲಾತ್ರಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಮಾರ್ಚ್ 23: 47,350 ರೂ, 51,670 ರೂ
ಮಾರ್ಚ್ 22: 47,750 ರೂ, 52,100 ರೂ
ಮಾರ್ಚ್ 21: 47,400 ರೂ, 51,700 ರೂ
ಮಾರ್ಚ್ 20: 47,300 ರೂ, 51,600 ರೂ
ಮಾರ್ಚ್ 19: 47,300 ರೂ, 51,600 ರೂ
ಮಾರ್ಚ್ 18: 47,450 ರೂ, 51,770 ರೂ
ಮಾರ್ಚ್ 17: 47,450 ರೂ, 51,760 ರೂ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು. (ಒನ್‌ಇಂಡಿಯಾ ಸುದ್ದಿ)












Click it and Unblock the Notifications