Infographics: ನವೆಂಬರ್ 02 ರಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಬೆಂಗಳೂರು, ನವೆಂಬರ್ 02: ಇನ್ನೇನು ದೀಪಾವಳಿಗೆ ಒಂದೆರಡು ದಿನಗಳು ಬಾಕಿ ಇರುವಾಗಲೇ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿದೆ. ಕಳೆದ ಮೂರ್ನಾಲ್ಕು ದಿನಗಳಿಂತ ಸ್ಥಿರವಾಗಿದ್ದ ಚಿನ್ನದ ಬೆಲೆ ನವೆಂಬರ್ 02ರಂದು ಹಲವು ನಗರಗಳಲ್ಲಿ ಏರಿಕೆಯಾಗಿದೆ.
22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850 ರೂ ಆಗಿದೆ, 24 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ 47,850 ರೂ. ಆಗಿದೆ. 110 ರೂ. ಹೆಚ್ಚಳವಾಗಿದೆ. ಇನ್ನು ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 44,800 ರೂ ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 48,870 ರೂ. ಆಗಿದೆ.
ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,850 ರೂ. ಆಗಿದೆ, 24 ಕ್ಯಾರೆಟ್‌ನ ಹತ್ತು ಗ್ರಾಂ ಚಿನ್ನ 47,850 ರೂ. ಇದೆ. ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 46,950 ರೂ. ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 51,200 ರೂ. ಆಗಿದೆ.

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.
ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಳ್ಳಿಯ ಬೆಲೆಯೂ ಏರಿಕೆ ಕಂಡಿದೆ, 1 ಕೆಜಿ ಬೆಳ್ಳಿಯ ಮೇಲೆ 300 ರೂ ಏರಿಕೆಯಾಗಿ 64,700 ಆಗಿದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ.
ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ.
ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್ ಚಿನ್ನದ ಬೆಲೆ 48 ಸಾವಿರದಿಂದ 49 ಸಾವಿರದ ಆಸುಪಾಸಿನಲ್ಲೇ ಇದೆ.
ಬೆಂಗಳೂರಲ್ಲಿ ಕಳೆದ 5 ದಿನಗಳ ಧಾರಣೆ
ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ನವೆಂಬರ್ 02: 44,800 ರೂ(+100ರು), --48,870 ರೂ (+100ರು)
ನವೆಂಬರ್ 01: 44,700 ರೂ, --48,770 ರೂ
ಅಕ್ಟೋಬರ್ 31: 44,700 ರೂ, --48,770 ರೂ
ಅಕ್ಟೋಬರ್ 30: 44,700 ರೂ,-- 48,770 ರೂ
ಅಕ್ಟೋಬರ್ 29: 44,850 ರೂ, --48,930 ರೂ
ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ
22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ) ನವೆಂಬರ್ 02: 46,850 ರೂ, 51,100 ರೂ ನವೆಂಬರ್ 01: 46, 850 ರೂ, 51,100 ರೂ ಅಕ್ಟೋಬರ್ 31: 46,850 ರೂ, 51,100 ರೂ ಅಕ್ಟೋಬರ್ 30: 46,850 ರೂ, 51,100 ರೂ ಅಕ್ಟೋಬರ್ 29: 47,000 ರೂ, 51,270 ರೂ ಬೆಳ್ಳಿ ಬೆಲೆ ಕೆ.ಜಿಗೆ 64,600 ರೂಪಾಯಿ












Click it and Unblock the Notifications