Infographics: ನ.08 ರಂದು ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ

ನವದೆಹಲಿ, ನವೆಂಬರ್ 08: ದೇಶದ ಪ್ರಮುಖ ನಗರಗಳಲ್ಲಿ ನವೆಂಬರ್ 08 ರಂದು ಸೋಮವಾರ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡು ಬಂದಿದೆ.

22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಮೇಲೆ 810 ರೂ. ಏರಿಕೆಯಾಗಿದ್ದು, 46,220 ರೂ ಇದ್ದ ಚಿನ್ನ 47,030 ರೂ. ಆಗಿದೆ.

ಇನ್ನು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಮೇಲೆ 810 ರೂ. ಏರಿಕೆಯಾಗಿದ್ದು, 47,220 ಇದ್ದ ಚಿನ್ನದ ಬೆಲೆ 48,030 ರೂ.ಗೆ ಏರಿಕೆಯಾಗಿದೆ.

Gold And Silver Rate Increased In Indias Major Cities On November 08, 2021

ಇನ್ನು ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 45,110 ರೂ. ಆಗಿದೆ, 24 ಕ್ಯಾರೆಟ್‌ ಚಿನ್ನ 49,210 ರೂ. ಆಗಿದೆ. ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನ 47,260 ರೂ, 24 ಕ್ಯಾರೆಟ್‌ನ ಚಿನ್ನ 51,560 ರೂ. ಆಗಿದೆ.

ಇನ್ನು ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನ 47,030 ರೂ. ಆಗಿದ್ದು, 24 ಕ್ಯಾರೆಟ್‌ನ ಅಪರಂಜಿ ಚಿನ್ನ 48,030 ರೂ. ಆಗಿದೆ.

ಬಂಗಾರದ ಬೆಲೆ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಂತೆ,ಬೆಳ್ಳಿ ದರ ಸಹ ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 64,800 ರೂ. ಇತ್ತು. ಇಂದು ಸಹ ಅದೇ ದರ ಇದೆ. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 64,800 ರೂ. ಇದೆ.

ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,000 ರೂ. ಆಗಿದೆ. ಇನ್ನು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ ಸಹ 6,800 ರೂ. ದರ ಇದೆ.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+