Infographics: ನವೆಂಬರ್ 10 ರಂದು ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಏರಿಕೆ

ನವದೆಹಲಿ, ನವೆಂಬರ್ 10: ದೇಶದ ವಿವಿಧ ನಗರಗಳಲ್ಲಿ ನವೆಂಬರ್ 10 ರಂದು ಬುಧವಾರ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 260 ರೂ ಏರಿಕೆಯಾಗಿದ್ದು, 47,250ಕ್ಕೆ ಬಂದು ತಲುಪಿದೆ. ಇನ್ನು 24 ಕ್ಯಾರೆಟ್‌ನ ಅಪರಂಜಿ ಚಿನ್ನವೂ ಕೂಡ 260 ರೂ ಏರಿಕೆಯಾಗಿ 10 ಗ್ರಾಂಗೆ 48,250 ರೂ.ಗೆ ತಲುಪಿದೆ.

ಇನ್ನು ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 45,200 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 49,310 ರೂ. ಆಗಿದೆ. ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 47,350 ರೂ. ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 51,700 ರೂ. ಆಗಿದೆ.

ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 47,250 ರೂ. ಆಗಿದೆ, 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 48,250 ರೂ. ಆಗಿದೆ.

Gold And Silver Rate Increased In Indias Major Cities On November 10, 2021

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

ಬಂಗಾರದ ಬೆಲೆ ದೇಶದಲ್ಲಿ ಇಳಿಕೆಯಾಗಿದ್ದರೆ,ಬೆಳ್ಳಿ ದರ (Silver Rate) ದೇಶದಲ್ಲಿ ಯಥಾಸ್ಥಿತಿ ಕಾಯ್ದುಕೊಂಡಿದೆ. 1 ಕೆಜಿ ಬೆಳ್ಳಿಗೆ 64,700 ರೂ. ಇತ್ತು. ಇಂದು ಸಹ ಅದೇ ದರ ಆಗಿದೆ. ಬೆಂಗಳೂರು, ಮೈಸೂರು ಹಾಗೂ ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 64,700 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 69,300 ರೂ. ಆಗಿದೆ. ಇನ್ನು, ಮುಂಬೈ, ದೆಹಲಿ ಹಾಗೂ ಕೋಲ್ಕತ್ತದಲ್ಲಿ ಸಹ 64,800 ರೂ. ದರ ಇದೆ.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು.

ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+