ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ನವೆಂಬರ್ 11ರಂದು ಚಿನ್ನದ ಬೆಲೆ ಏರಿಕೆ

|
Google Oneindia Kannada News

ನವದೆಹಲಿ, ನವೆಂಬರ್ 11: ದೇಶಾದ್ಯಂತ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಭಾರತದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,340 ರೂ ಇದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ 48,340 ರೂ ಆಗಿದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,900ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 50,070 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,340 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,340ರೂ. ಇದೆ.

ಹೈದರಾಬಾದ್‌ನಲ್ಲಿ ಚಿನ್ನದ ದರವು 22 ಕ್ಯಾರೆಟ್‌ನ 10 ಗ್ರಾಂಗೆ 45,210 ರೂ.ಗೆ ಏರಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನ ರೂ. 49,320 ಹೆಚ್ಚಳದೊಂದಿಗೆ ರೂ. 220 ಏರಿಕೆಯಾಗಿದೆ. ಕೇರಳದಲ್ಲಿ ಪ್ರತಿ 10 ಗ್ರಾಂ 22 ಕ್ಯಾರೆಟ್‌ನ ಚಿನ್ನದ ದರ ರೂ. 45,210 ಮತ್ತು 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ದರ ರೂ. 49,320 ಇದೆ.

Gold And Silver Rate Increased In Indias Major Cities On November 11, 2021

ಬೆಳ್ಳಿಯ ಬೆಲೆ 1 ಕೆ.ಜಿ ಗೆ 66,500 ರು ಇದೆ. ಎಂಸಿಎಕ್ಸ್ ನಲ್ಲಿ ನವೆಂಬರ್ 11ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,941 ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 66.394.00ರು ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ +5.00ರಷ್ಟು ಏರಿಕೆಯಾಗಿ 1,832.00 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ -0.6 ಏರಿಕೆಯಾಗಿ 24.34 ಯುಎಸ್ ಡಾಲರ್ ಆಗಿದೆ.

ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,340 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,72,500 ರೂಪಾಯಿ ನಿಗದಿಯಾಗಿದೆ. ಇನ್ನು, 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 48,340ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,83,400 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ ಸುಮಾರು 2,600 ರೂಪಾಯಿ ಏರಿಕೆ ಕಂಡು ಬಂದಿದೆ.

ವಿಶಾಖಪಟ್ಟಣಂನಲ್ಲಿ ಚಿನ್ನದ ದರರೂ. 22 ಕ್ಯಾರೆಟ್‌ನ 10 ಗ್ರಾಂಗೆ 45,900 ರೂ. 210 ರೂ ಏರಿಕೆಯಾಗಿ, 10 ಗ್ರಾಂ 24 ಕ್ಯಾರೆಟ್ ಚಿನ್ನ ರೂ 50,070 ಹೆಚ್ಚಳದೊಂದಿಗೆ ರೂ. ಆಗಿದೆ.

ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಖರೀದಿಸಲು ಯೋಜಿಸುವಾಗ, ಬ್ರ್ಯಾಂಡೆಡ್‌ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.

ಕೊರೋನಾ ವೈರಸ್ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು.

ಲಾಕ್‌ಡೌನ್‌ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್‌ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.

ಭಾರತದಲ್ಲಿ ಹೆಚ್ಚು ಜನಸಂಖ್ಯೆ ಇರುವ ಹಾಗೆ ಆಭರಣ ಪ್ರಿಯರ ಜನಸಂಖ್ಯೆಯೂ ಕಡಿಮೆ ಏನಿಲ್ಲ. ಈ ಹಿನ್ನೆಲೆ ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 49 ಸಾವಿರದಿಂದ 50 ಸಾವಿರದ ಆಸುಪಾಸಿನಲ್ಲೇ ಇದೆ.

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.

English summary
Gold, silver rate increased in India's major cities including Bengaluru, Chennai, Mumbai, Delhi on November 11, 2021:
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X