Infographics: ಅ.4ರಂದು ಚಿನ್ನದ ಬೆಲೆಯಲ್ಲಿ ಏರಿಕೆ, ಎಲ್ಲಿ? ಎಷ್ಟು?
ನವದೆಹಲಿ, ಅಕ್ಟೋಬರ್ 04: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ನೀವೇನಾದರೂ ಚಿನ್ನ ಖರೀದಿಸಲು ಬಯಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ ಇಲ್ಲಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,470 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 43,510 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.
ಸೋಮವಾರ, ಅಕ್ಟೋಬರ್ 04ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 45,570 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 49,730 ರೂ ಆಗಿದೆ.
ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿಯನ್ನು ಖರೀದಿಸಲು ಯೋಜಿಸುವಾಗ, ಬ್ರಾಂಡೆಡ್ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.
ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು. ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ. ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 49,720 ರೂ.ಇದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.
ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆಇಂದು ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ 1 ಕೆಜಿ ಬೆಳ್ಳಿಗೆ 60,500 ರೂ. ಇತ್ತು. ಇಂದೂ ಸಹ ಅದೇ ಬೆಲೆಯನ್ನು ಕಾಯ್ದುಕೊಂಡಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆ ಇಂದು 60,500 ರೂ. ಇದೆ. ಉಳಿದಂತೆ ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 64,600 ರೂ. ಆಸುಪಾಸಿನಲ್ಲಿದೆ.

ಬೆಂಗಳೂರಿನಲ್ಲಿ ಚಿನ್ನದ ಬೆಲೆ
ಅಕ್ಟೋಬರ್ 4 ರಂದು 22 ಕ್ಯಾರೆಟ್ ಚಿನ್ನದ ಬೆಲೆ 10ಗ್ರಾಂಗೆ 43,510 ರೂ.ಗಳಿವೆ. 24 ಕ್ಯಾರೇಟ್ ಚಿನ್ನಕ್ಕೆ 47,470 ರೂ. ಇದೆ.
ಬೆಂಗಳೂರಿನಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 04: 43,510 ರೂ (-) 47,470 ರೂ (-)
ಅಕ್ಟೋಬರ್ 03: 43,510 ರೂ (10 ರೂ ಏರಿಕೆ) 47,470 ರೂ (10 ರೂ ಏರಿಕೆ)
ಅಕ್ಟೋಬರ್ 02: 43,500 ರೂ (100 ರೂ ಏರಿಕೆ) 47,460 ರೂ (110 ರೂ ಏರಿಕೆ)
ಅಕ್ಟೋಬರ್ 01: 43,400 ರೂ (350 ರೂ ಏರಿಕೆ) 47,350 ರೂ (390 ರೂ ಏರಿಕೆ)
ಸೆಪ್ಟೆಂಬರ್ 30: 43,050 ರೂ (150 ರೂ ಇಳಿಕೆ) 47,960 ರೂ (170 ರೂ ಇಳಿಕೆ) ಸೆಪ್ಟೆಂಬರ್ 29: 43,200 ರೂ(50ರೂ. ಇಳಿಕೆ) 47, 130 ರೂ. ಸೆಪ್ಟೆಂಬರ್ 28: 43,250 ರೂ (150 ರೂ ಇಳಿಕೆ) 47,130 ರೂ (160 ರೂ ಇಳಿಕೆ)
ಸೆಪ್ಟೆಂಬರ್ 27: 43,350 ರೂ (150 ರೂ ಏರಿಕೆ) 47,290 ರೂ (160 ರೂ ಏರಿಕೆ)
ಸೆಪ್ಟೆಂಬರ್ 26: 43,200 ರೂ (-) 47,130 ರೂ (-) ಬೆಳ್ಳಿ: 1 ಕೆ.ಜಿಗೆ 59,500 ರೂಪಾಯಿ (1200 ರೂ ಏರಿಕೆ)

ಚಿನ್ನದ ಬೆಲೆ ನಿರ್ಧರಿಸುವುದು ಹೇಗೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

ಚಿನ್ನದ ಬೆಲೆ ಆಧಾರಿತವಾಗಿರುವ ಎರಡು ಅಂಶಗಳು
ಅಕ್ಟೋಬರ್ ಚಿನ್ನದ ಬೆಲೆಯು ಎರಡು ಅಂಶಗಳ ಮೇಲೆ ಆಧಾರಿತವಾಗಿರುವ ಸಾಧ್ಯತೆ ಇದೆ. ಹಣದುಬ್ಬರದ ಸಂದರ್ಭ ಯುಎಸ್ ವೈಯಕ್ತಿಕ ಬಳಕೆ ವೆಚ್ಚ (ಪಿಸಿಇ) ಸೂಚ್ಯಂಕ ಹಾಗೂ ಅಕ್ಟೋಬರ್ ಮೊದಲ ವಾರದಲ್ಲಿ ಪ್ರಕಟಿಸಲಾಗುವ ಆಗಸ್ಟ್ ಕೃಷಿಯೇತರ ವೇತನದಾರರ ಡೇಟಾದ ಮೇಲೆ ಚಿನ್ನದ ಬೆಲೆಯು ಆಧಾರಿತವಾಗಿರಲಿದೆ. ಉದ್ಯೋಗ ಡೇಟಾದಲ್ಲಿ ಯಾವುದೇ ಪಾಸಿಟಿವ್ ಅಂಶ ಹಾಗೂ ಯುಎಸ್ ಹಣದುಬ್ಬರವು ಮಾತ್ರ ಚಿನ್ನದ ಬೆಲೆಯು ಮತ್ತಷ್ಟು ಇಳಿಕೆಯಾಗುವಂತೆ ಮಾಡಲಿದೆ. ಅದನ್ನು ಹೊರತುಪಡಿಸಿದರೆ, ಚಿನ್ನದ ಬೆಲೆಯು ಮತ್ತಷ್ಟು ಅಧಿಕವಾಗುವ ಎಲ್ಲಾ ಸಾಧ್ಯತೆಗಳು ಇದೆ.

ಚಿನ್ನದ ಏರಿಳಿತಕ್ಕೆ ಕಾರಣ
ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ. ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.












Click it and Unblock the Notifications