Infographics: ಅಕ್ಟೋಬರ್ 05ರಂದು ಚಿನ್ನದ ದರದಲ್ಲಿ ಏರಿಕೆ
ಬೆಂಗಳೂರು, ಅಕ್ಟೋಬರ್ 05: ಇಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ.
ಅಕ್ಟೋಬರ್ 04 ರಂದು ಹಲವು ನಗರಗಳಲ್ಲಿ ಚಿನ್ನದ ಬೆಲೆ ಸ್ಥಿರವಾಗಿತ್ತು ಆದರೆ ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ ಕಂಡಿದೆ.
ಮಂಗಳವಾರ, ಅಕ್ಟೋಬರ್ 05ರಂದು ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆ 45,650 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 49,800 ರೂ ಆಗಿದೆ.
22 ಕ್ಯಾರೇಟ್ ಚಿನ್ನ 10 ಗ್ರಾಂಗೆ 190 ರೂ ಏರಿಕೆಯಾಗಿ 45,680 ರೂ. ಇದೆ. 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 190 ರೂ. ಏರಿಕೆಯಾಗಿ 46,680 ರೂ. ಆಗಿದೆ. ಇನ್ನು ಬೆಂಗಳೂರಿನಲ್ಲಿ 22 ಕ್ಯಾರೇಟ್ ಚಿನ್ನಕ್ಕೆ 43,750 ರೂ. ಇದ್ದು, 22 ಕ್ಯಾರೆಟ್ ಚಿನ್ನಕ್ಕೆ 47,730 ರೂ. ಇದೆ.

ದೆಹಲಿಯಲ್ಲಿ 45,900, 50,080 ರೂ., ಮುಂಬೈನಲ್ಲಿ 45,680, 46,680 ರೂ. ಇದೆ. ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ. ಆಗಸ್ಟ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.
ಅಕ್ಟೋಬರ್ ಚಿನ್ನದ ಬೆಲೆಯು ಎರಡು ಅಂಶಗಳ ಮೇಲೆ ಆಧಾರಿತವಾಗಿರುವ ಸಾಧ್ಯತೆ ಇದೆ. ಹಣದುಬ್ಬರದ ಸಂದರ್ಭ ಯುಎಸ್ ವೈಯಕ್ತಿಕ ಬಳಕೆ ವೆಚ್ಚ (ಪಿಸಿಇ) ಸೂಚ್ಯಂಕ ಹಾಗೂ ಅಕ್ಟೋಬರ್ ಮೊದಲ ವಾರದಲ್ಲಿ ಪ್ರಕಟಿಸಲಾಗುವ ಆಗಸ್ಟ್ ಕೃಷಿಯೇತರ ವೇತನದಾರರ ಡೇಟಾದ ಮೇಲೆ ಚಿನ್ನದ ಬೆಲೆಯು ಆಧಾರಿತವಾಗಿರಲಿದೆ.
ಉದ್ಯೋಗ ಡೇಟಾದಲ್ಲಿ ಯಾವುದೇ ಪಾಸಿಟಿವ್ ಅಂಶ ಹಾಗೂ ಯುಎಸ್ ಹಣದುಬ್ಬರವು ಮಾತ್ರ ಚಿನ್ನದ ಬೆಲೆಯು ಮತ್ತಷ್ಟು ಇಳಿಕೆಯಾಗುವಂತೆ ಮಾಡಲಿದೆ. ಅದನ್ನು ಹೊರತುಪಡಿಸಿದರೆ, ಚಿನ್ನದ ಬೆಲೆಯು ಮತ್ತಷ್ಟು ಅಧಿಕವಾಗುವ ಎಲ್ಲಾ ಸಾಧ್ಯತೆಗಳು ಇದೆ.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್(1 ounce=28.3495 ಗ್ರಾಂ)ಗೆ ಶೇ 0.61ರಷ್ಟು ಇಳಿಕೆಯಾಗಿ 1,757.36 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.90% ಇಳಿಕೆಯಾಗಿ 22.41 ಯುಎಸ್ ಡಾಲರ್ ಆಗಿದೆ.
ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು.
ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
ಆಪತ್ಕಾಲದಲ್ಲಿ ನೆರವಾಗುವ ಚಿನ್ನದ ಮೇಲೆ ಹೂಡಿಕೆ ಮಾಡುವ ಸಂಪ್ರದಾಯ ಇನ್ನೂ ಕಡಿಮೆಯಾಗಿಲ್ಲ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆಯಿದೆ.
ಬೇರೆಲ್ಲ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ 49,720 ರೂ.ಇದೆ. ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ.











Click it and Unblock the Notifications