Infographics: ಅ.16ರಂದು ಚಿನ್ನದ ಬೆಲೆ ಯಾವ ನಗರದಲ್ಲಿ ಎಷ್ಟು ಏರಿಕೆ?
ಬೆಂಗಳೂರು, ಅಕ್ಟೋಬರ್ 16: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ ಸ್ವಲ್ಪ ಏರಿಕೆಯಾಗಿದೆ.
ಶನಿವಾರ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ ಮೇಲೆ 10 ರೂ ಏರಿಕೆಯಾಗಿ 47,080ರೂ. ಆಗಿದೆ. ಇನ್ನು 24 ಕ್ಯಾರೆಟ್ ಅಪರಂಜಿ ಚಿನ್ನ ಕೂಡ 10 ರೂ. ಏರಿಕೆಯಾಗಿ 48,080 ರೂ. ಆಗಿದೆ. ಇನ್ನು ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 44,200 ರೂ. ಇದ್ದು, 24 ಕ್ಯಾರೆಟ್ ಚಿನ್ನದ ಬೆಲೆ 48,220 ರೂ. ಆಗಿದೆ. ದೆಹಲಿಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,000 ಇದ್ದು 24 ಕ್ಯಾರೆಟ್ ಚಿನ್ನದ ಬೆಲೆ 51,230 ರೂ. ಆಗಿದೆ.
ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1803.78 ಡಾಲರ್ ಹಾಗೂ ಕನಿಷ್ಠ 1728.92 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 23.90 ಡಾಲರ್ ಹಾಗೂ ಕನಿಷ್ಠ 21.57 ಡಾಲರ್ ಮುಟ್ಟಿತ್ತು. ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಅಕ್ಟೋಬರ್ 16 ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ. ಸೆಪ್ಟೆಂಬರ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.
ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಬೆನ್ನಲ್ಲೇ ಬಹುತೇಕ ಆರ್ಥಿಕ ವ್ಯವಹಾರಗಳು ಸ್ಥಗಿತಗೊಂಡಿದ್ದವು. ರಿಯಲ್ ಎಸ್ಟೇಟ್ ಸೇರಿ ಸಾಕಷ್ಟು ಉದ್ಯಮಗಳು ನೆಲ ಕಚ್ಚಿದ್ದವು. ಇದರ ನೇರ ಪರಿಣಾಮ ಚಿನ್ನದ ಮಾರುಕಟ್ಟೆಯ ಮೇಲೆ ಉಂಟಾಗಿತ್ತು.
ಲಾಕ್ಡೌನ್ ತೆರವಾಗುತ್ತಿದ್ದಂತೆ ನಿಧಾನವಾಗಿ ಆರ್ಥಿಕ ಚಟುವಟಿಕೆಗಳು ಚೇತರಿಕೆ ಪಡೆದುಕೊಳ್ಳುತ್ತಿವೆ. ಚಿನ್ನ ಖರೀದಿಯ ವಿಚಾರದಲ್ಲಿ ಜಿಎಸ್ಟಿ ಅಥವಾ ಸೇವಾ ತೆರಿಗೆ ಷೇರು ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತದೆ.
ಬೆಂಗಳೂರು ದಕ್ಷಿಣ ಭಾರತದಲ್ಲಿ ಬೆಳ್ಳಿಯಂತಹ ಲೋಹದ ಎರಡನೇ ಅತಿ ದೊಡ್ಡ ಮಾರುಕಟ್ಟೆಯಾಗಿದೆ. ಬೆಂಗಳೂರಿನಲ್ಲಿ ಬೆಳ್ಳಿಯನ್ನು ಖರೀದಿಸಲು ಯೋಜಿಸುವಾಗ, ಬ್ರಾಂಡೆಡ್ ಆಭರಣಗಳನ್ನು ಮಾರಾಟ ಮಾಡುವ ಪ್ರಮಾಣೀಕೃತ ಆಭರಣ ವ್ಯಾಪಾರಿಗಳನ್ನು ಸಂಪರ್ಕಿಸುವುದು ಉತ್ತಮ. ಬೆಂಗಳೂರಿನಲ್ಲಿ ಹೂಡಿಕೆ ಉದ್ದೇಶಗಳಿಗಾಗಿ ಬೆಳ್ಳಿ ಅತ್ಯಂತ ಜನಪ್ರಿಯ ವಸ್ತು.
ಆಯಾ ರಾಜ್ಯಗಳು ವಿಧಿಸುವ ಸೇವಾ ತೆರಿಗೆಯಿಂದ ಬೇರೆ ಬೇರೆ ರಾಜ್ಯಗಳಲ್ಲಿ ಚಿನ್ನದ ಬೆಲೆ ಏರಿಳಿತ ಕಾಣುತ್ತಿರುತ್ತದೆ. ಕಳೆದೆರಡು ತಿಂಗಳಿಂದ ಚಿನ್ನದ ದರ ಹೆಚ್ಚಾಗುತ್ತಲೇ ಇದೆ. ಇಲ್ಲಿ ನಮೂದಿಸಿರುವ ಚಿನ್ನದ ಬೆಲೆಗಳು ಆಭರಣದ ಶೋರೂಂ ಹಾಗೂ ಕೆಲವು ರಾಜ್ಯಗಳಲ್ಲಿ ಕೊಂಚ ಹೆಚ್ಚೂ ಕಡಿಮೆ ಆಗಬಹುದು.
ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು.
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಬೆಂಗಳೂರಿನಲ್ಲಿ ಚಿನ್ನದ ಬೆಲೆ ಎಷ್ಟಿದೆ?
ಬೆಲೆ 22 ಕ್ಯಾರೆಟ್ 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)
ಅಕ್ಟೋಬರ್ 16:44,200ರೂ (600 ರೂ. ಇಳಿಕೆ) , 48,220 ರೂ(650 ರೂಇಳಿಕೆ)
ಅಕ್ಟೋಬರ್ 15:44,800 ರೂ, 48,870 ರೂ
ಅಕ್ಟೋಬರ್ 14: 44,700, ರೂ48,760 ರೂ
ಅಕ್ಟೋಬರ್ 13: 44,150, 48, 160 ರೂ
ಅಕ್ಟೋಬರ್ 12: 44,150, 48, 160 ರೂ
ಅಕ್ಟೋಬರ್ 11: 43,900 ರೂ (-) 47,890 ರೂ (-)
ಅಕ್ಟೋಬರ್ 10: 43,900 ರೂ (-) 47,890 ರೂ (-)
ಬೆಳ್ಳಿ ಬೆಲೆ ಕೆ.ಜಿಗೆ 63,600 ರೂಪಾಯಿ
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications