Infographics: ಡಿ.01ರಂದು ಚಿನ್ನದ ಬೆಲೆ ಎಲ್ಲಿ ಎಷ್ಟು ಇಳಿಕೆ?
ನವದೆಹಲಿ, ಡಿಸೆಂಬರ್ 01: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಡಿಸೆಂಬರ್ 01ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಡಿಸೆಂಬರ್ 01ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ತಗ್ಗಿ 47,601.00ರು ಹಾಗೂ ಬೆಳ್ಳಿ ಬೆಲೆ ಏರಿಕೆ ಕಂಡು 61,715ರು ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.76ರಷ್ಟು ಏರಿಕೆಯಾಗಿ 1,786.45 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.25ರಷ್ಟು ಏರಿಕೆಯಾಗಿ 22.85 ಯುಎಸ್ ಡಾಲರ್ ಆಗಿದೆ.
ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1866.69 ಡಾಲರ್ ಹಾಗೂ ಕನಿಷ್ಠ 1776.80 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 25.53 ಡಾಲರ್ ಹಾಗೂ ಕನಿಷ್ಠ 23.33 ಡಾಲರ್ ಮುಟ್ಟಿತ್ತು.
ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಡಿಸೆಂಬರ್ 01ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 47,550ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಇಳಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 61,725ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಇಳಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಚಿನ್ನದ ಏರಿಳಿತಕ್ಕೆ ಕಾರಣ
ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಹೊಸ ರೂಪಾಂತರ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 250 ರು ಇಳಿಕೆಯಾಗಿ 44,600ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 280 ರು ಇಳಿಕೆಯಾಗಿ 48,650 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 66,300ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 61,700ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಇಲ್ಲಿದೆ

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
-
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ -
Gold Price Update: ಆಭರಣಪ್ರಿಯರೇ ಗಮನಿಸಿ, ಇಂದು ಚಿನ್ನದ ಬೆಲೆ ಏರಿಕೆ- ಬೆಳ್ಳಿ ಸ್ಥಿರ, ಮಾರುಕಟ್ಟೆ ದರ ವಿವರ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಏಪ್ರಿಲ್ 13ರ ದರಪಟ್ಟಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ











Click it and Unblock the Notifications