Infographics: ಡಿ.18ರಂದು ಚಿನ್ನದ ದರ ಎಷ್ಟು ಇಳಿಕೆ?

ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಳಿತ ಕಾಣುತ್ತಿದೆ. ಡಿಸೆಂಬರ್ 18ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್ ನಲ್ಲಿ ಡಿಸೆಂಬರ್ 18ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 48,603ರು ಹಾಗೂ ಬೆಳ್ಳಿ ಬೆಲೆ ಹಿಗ್ಗಿ ಕಂಡು 62,165ರೂ. ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ)ಗೆ ಶೇ +7ಇಳಿಕೆಯಾಗಿ 1,780ಯುಎಸ್ ಡಾಲರ್‌ನಷ್ಟಿದೆ.

ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1866.69 ಡಾಲರ್ ಹಾಗೂ ಕನಿಷ್ಠ 1776.80 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 25.53 ಡಾಲರ್ ಹಾಗೂ ಕನಿಷ್ಠ 23.33 ಡಾಲರ್ ಮುಟ್ಟಿತ್ತು. ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಡಿಸೆಂಬರ್ 17ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಚಿನ್ನದ ಮೌಲ್ಯ ಏರಿಳಿತ

ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 48,700ರು ನಂತೆ ಬಿಡ್ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ 0.01%ರಷ್ಟು ಏರಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 62,148ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ 0.10%ರಷ್ಟು ಇಳಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಹೊಸ ರೂಪಾಂತರ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ, ಯುರೋಪಿಯನ್ ಯೂನಿಯನ್ ಕೊರೊನಾ ನಿರ್ಬಂಧ, ಚೀನಾ-ಭಾರತ ಗಡಿ ವಿವಾದ, ಕೊರೊನಾ ಲಸಿಕೆ ಅಭಿಯಾನ ಪ್ರಗತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಚಿನ್ನದ ದರ

ಬೆಂಗಳೂರಿನಲ್ಲಿ ಚಿನ್ನದ ದರ

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 45,700ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 49,850ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 47,720ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,720ರೂ. ಇದೆ.
ಇನ್ನು ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 46,850 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,200ರೂ. ಇದೆ. ಚೆನ್ನೈನಲ್ಲಿ45,940ರೂ. ಹಾಗೂ ಅಪರಂಜಿ50,120ರು ಪ್ರತಿ 10 ಗ್ರಾಂಗೆ ಬೆಲೆ ಇದೆ.

ಚಿನ್ನದ ಬೆಲೆ

ಚಿನ್ನದ ಬೆಲೆ

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+