ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ನ.30ರಂದು ಚಿನ್ನದ ಬೆಲೆ ಎಲ್ಲಿ ಎಷ್ಟು ಇಳಿಕೆ?

|
Google Oneindia Kannada News

ನವದೆಹಲಿ, ನವೆಂಬರ್ 30: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ, ಕರ್ಫ್ಯೂ ಸಡಿಲಗೊಂಡಿದೆ. ಜಾಗತಿಕವಾಗಿ ಇಂಧನ ದರ ಏರಿಳಿತ, ಕೋವಿಡ್ 19 ರೂಪಾಂತರ ಉಲ್ಬಣವಾಗುವ ಭೀತಿ ನಡುವೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ ಏರಿಕೆ ಕಾಣುತ್ತಿದೆ. ನವೆಂಬರ್ 30ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ 10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಚೇತರಿಕೆ ಕಂಡಿದೆ, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.

ಎಂಸಿಎಕ್ಸ್‌ನಲ್ಲಿ ನವೆಂಬರ್ 30ರ ವಹಿವಾಟು ಫ್ಯೂಚರ್ ಗೋಲ್ಡ್ ಕೊಂಚ ಹಿಗ್ಗಿ 47,925.00ರು ಹಾಗೂ ಬೆಳ್ಳಿ ಬೆಲೆ ಇಳಿಕೆ ಕಂಡು 61,670ರು ಗೆ ಆಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್‌ (1 ounce=28.3495 ಗ್ರಾಂ) ಗೆ ಶೇ 0.40ರಷ್ಟು ಇಳಿಕೆಯಾಗಿ 1,779.94 ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 0.44ರಷ್ಟು ಇಳಿಕೆಯಾಗಿ 22.85 ಯುಎಸ್ ಡಾಲರ್ ಆಗಿದೆ.

ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1866.69 ಡಾಲರ್ ಹಾಗೂ ಕನಿಷ್ಠ 1776.80 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 25.53 ಡಾಲರ್ ಹಾಗೂ ಕನಿಷ್ಠ 23.33 ಡಾಲರ್ ಮುಟ್ಟಿತ್ತು.

ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ನವೆಂಬರ್ 26ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 47,570ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಇಳಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 61,632ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಇಳಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಚಿನ್ನದ ಏರಿಳಿತಕ್ಕೆ ಕಾರಣ

ಚಿನ್ನದ ಏರಿಳಿತಕ್ಕೆ ಕಾರಣ

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ, ಕಳೆದ ವಹಿವಾಟಿನಲ್ಲಿ ಎಂಸಿಎಕ್ಸ್‌ನಲ್ಲಿ 47,570ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಇಳಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 61,632ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಇಳಿಕೆಯಾಗಿದೆ. ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರ ನೀರಿಕ್ಷಿತ ಮಟ್ಟ ಮುಟ್ಟಿಲ್ಲ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 100 ರು ಇಳಿಕೆಯಾಗಿ 44,850ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 110 ರು ಇಳಿಕೆಯಾಗಿ 48,930ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 66,500ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 61,900ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಇಲ್ಲಿದೆ (https://kannada.goodreturns.in/silver-rates/)

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Recommended Video

Dravid ಮುಂದಿನ ಪಂದ್ಯಕ್ಕಾಗಿ ಏನೇನು ಉಪಾಯ ಮಾಡಿದ್ದಾರೆ | Oneindia Kannada

English summary
Gold, silver rate slashed in India's major cities including Bengaluru, Chennai, Mumbai, Delhi on November 30, 2021
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X