Infographics: ಅ.14ರಂದು ಹಳದಿ ಲೋಹದ ಬೆಲೆ ಎಷ್ಟಾಗಿದೆ ಏರಿಳಿತ?
ನವದೆಹಲಿ, ಅಕ್ಟೋಬರ್ 14: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಾರಾಂತ್ಯದ ಕರ್ಫ್ಯೂ ಕೂಡಾ ತೆರವುಗೊಂಡಿದ್ದು, ದಸರಾ ಹಬ್ಬದ ಋತುವಿನಲ್ಲಿ ಚಿನಿವಾರ ಪೇಟೆಯಲ್ಲಿ ವಹಿವಾಟು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಕೆಲವೆಡೆ ವಹಿವಾಟು ಹೆಚ್ಚಿನ ಪ್ರಗತಿ ಕಾಣುತ್ತಿಲ್ಲ. ಅಕ್ಟೋಬರ್ 14ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತವಾಗಿದ್ದು, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್ನಲ್ಲಿ ಚಿನ್ನದ ದರ ದಿನದ ವಹಿವಾಟಿನ ಅಂತ್ಯಕ್ಕೆ ಪ್ರತಿ 10 ಗ್ರಾಂಗೆ ಏರಿಕೆಯಾಗಿ 47, 988ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಹಿಗ್ಗಿ 63, 489ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 0.29ರಷ್ಟು ಏರಿಕೆಯಾಗಿ 1,797.13 ಯುಎಸ್ ಡಾಲರ್ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.26ರಷ್ಟು ಏರಿಕೆಯಾಗಿ 23.36ಯುಎಸ್ ಡಾಲರ್ ಆಗಿದೆ.
ಕಳೆದ 30 ದಿನಗಳಲ್ಲಿ ಸ್ಪಾಟ್ ಗೋಲ್ಡ್ ಗರಿಷ್ಠ 1803.78 ಡಾಲರ್ ಹಾಗೂ ಕನಿಷ್ಠ 1728.92 ಡಾಲರ್ ತಲುಪಿತ್ತು. ಇದೇ ಅವಧಿಯಲ್ಲಿ ಬೆಳ್ಳಿ ದರ ಗರಿಷ್ಠ 23.90 ಡಾಲರ್ ಹಾಗೂ ಕನಿಷ್ಠ 21.57 ಡಾಲರ್ ಮುಟ್ಟಿತ್ತು.
ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಅಕ್ಟೋಬರ್ 14ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಮೌಲ್ಯ ಏರಿಳಿತ ಪ್ರಮುಖ ಕಾರಣ ಯುರೋಪಿಯನ್ ಸೆಂಟ್ರಲ್ ಬ್ಯಾಂಕಿನ ಮುಂದಿನ ನಿರ್ಣಯದ ಬಗ್ಗೆ ಉಂಟಾಗಿರುವ ನಿರೀಕ್ಷೆ ಎನ್ನಬಹುದು, ಅ.14ರಂದು ಬೆಳಗ್ಗೆ ಎಂಸಿಎಕ್ಸ್ನಲ್ಲಿ 47,808ರು ನಂತೆ ವಹಿವಾಟು ಆರಂಭಿಸಿ ಹಳದಿ ಲೋಹ ದಿನದ ಅಂತ್ಯಕ್ಕೆ ಹೆಚ್ಚು ಚೇತರಿಕೆ ಕಂಡಿದೆ. ಬೆಳ್ಳಿ ಆರಂಭದಲ್ಲಿ 62,577ರು ನಂತೆ ಆರಂಭವಾಗಿ ದಿನದ ಅಂತ್ಯಕ್ಕೆ ಏರಿಕೆಯಾಗಿದೆ.

ಚಿನ್ನದ ಏರಿಳಿತಕ್ಕೆ ಕಾರಣ
ಜಾಗತಿಕ ರಾಜಕೀಯ ವಿದ್ಯಮಾನ, ಡಾಲರ್ ಮೌಲ್ಯ ಏರಿಕೆ, ಕೊರೊನಾ ಲಸಿಕೆ ಅಭಿಯಾನ, ಕೊರೊನಾ ಲಾಕ್ ಡೌನ್, ಹವಾಮಾನ ವೈಪರೀತ್ಯ, ಜಾಗತಿಕ ಆರ್ಥಿಕ ಚೇತರಿಕೆ, ಹಲವು ಪ್ರಮುಖ ಬ್ಯಾಂಕುಗಳ ಆರ್ಥಿಕ ನೀತಿ ಎಲ್ಲವೂ ಚಿನ್ನದ ಏರಿಳಿತಕ್ಕೆ ಕಾರಣವಾಗಿವೆ ಎಂದು ಕೋಟಕ್ ಸೆಕ್ಯುರಿಟೀಸ್ ಉಪಾಧ್ಯಕ್ಷ ರವೀಂದ್ರ ರಾವ್ ಅಭಿಪ್ರಾಯಪಟ್ಟಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ಚಿನ್ನದ ಆಮದು ಹೆಚ್ಚಿನ ಪ್ರಮಾಣದಲ್ಲಿದ್ದರೂ ದೇಶಿ ಮಾರುಕಟ್ಟೆಯಲ್ಲಿ ಬೇಡಿಕೆ ಹಿಗ್ಗಿಲ್ಲ, ಹಬ್ಬದ ಋತುವಿನಲ್ಲಿ ಹೆಚ್ಚಿನ ಹೂಡಿಕೆ, ವ್ಯವಹಾರದ ನಿರೀಕ್ಷೆಯಂತೂ ಇದ್ದೇ ಇದೆ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ ದರ
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 44,700ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 48,760ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್ನಲ್ಲಿ 66,600ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 63,200ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?
ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
Adani Total Gas: ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಸಿಎನ್ಜಿ, ಪಿಎನ್ಜಿ ದರ ಸ್ಥಿರ: ಅದಾನಿ ಗ್ಯಾಸ್ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications