Infographics: ಸೆಪ್ಟೆಂಬರ್ 07ರಂದು ಚಿನ್ನದ ಬೆಲೆ ಇಳಿಕೆ
ನವದೆಹಲಿ, ಸೆಪ್ಟೆಂಬರ್ 07: ದೇಶದ ಹಲವೆಡೆ ಕೋವಿಡ್ 19 ನಿರ್ಬಂಧ ಸಡಿಲಗೊಳಿಸಲಾಗುತ್ತಿದ್ದು, ವಾರಾಂತ್ಯದ ಕರ್ಫ್ಯೂ ಕೂಡಾ ತೆರವುಗೊಂಡಿದ್ದು, ಚಿನಿವಾರ ಪೇಟೆಯಲ್ಲಿ ವಹಿವಾಟು ಹೆಚ್ಚಾಗುವ ನಿರೀಕ್ಷೆ ಹೊಂದಲಾಗಿದೆ. ಆದರೆ, ಕೆಲವೆಡೆ ನಿರ್ಬಂಧ ಮುಂದುವರೆದಿದೆ. ಸೆಪ್ಟೆಂಬರ್ 07ರಂದು ಭಾರತದ ಪ್ರಮುಖ ನಗರಗಳಲ್ಲಿನ ಚಿನ್ನ10 ಗ್ರಾಂ ಹಾಗೂ ಬೆಳ್ಳಿ ಕೆಜಿಗೆ ಬೆಲೆ ಏರಿಳಿತವಾಗಿದ್ದು, ದೇಶದ ಪ್ರಮುಖ ನಗರದಲ್ಲಿ ಬೆಲೆ ಎಷ್ಟಿದೆ ಎಂಬುದರ ಸಚಿತ್ರ ವರದಿ ಇಲ್ಲಿದೆ.
ಎಂಸಿಎಕ್ಸ್‌ನಲ್ಲಿ ಚಿನ್ನದ ದರ ಪ್ರತಿ 10 ಗ್ರಾಂಗೆ ಇಳಿಕೆಯಾಗಿ 46,913ರು ಆಗಿದೆ. ಬೆಳ್ಳಿ ದರ ಪ್ರತಿ 1 ಕೆ.ಜಿಗೆ ಬೇಡಿಕೆ ಹಿಗ್ಗಿ 64,440ರು ನಷ್ಟಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಸತತವಾಗಿ ಚಿನ್ನ ಹಾಗೂ ಬೆಳ್ಳಿ ದರ ಏರಿಳಿತ ಕಂಡಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ, ಸ್ಪಾಟ್ ಗೋಲ್ಡ್ ಪ್ರತಿ ಔನ್ಸ್ (1 ounce=28.3495 ಗ್ರಾಂ) ಗೆ ಶೇ 1.53ರಷ್ಟು ಇಳಿಕೆಯಾಗಿ 1,796.73ಯುಎಸ್ ಡಾಲರ್‌ನಷ್ಟಿದೆ. ಬೆಳ್ಳಿ ಪ್ರತಿ ಔನ್ಸ್ ಬೆಲೆ ಶೇ 1.76ರಷ್ಟು ಇಳಿಕೆಯಾಗಿ 24.25 ಯುಎಸ್ ಡಾಲರ್ ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 110ರು ಇಳಿಕೆಗೊಂಡು 44,400ರು ಬೆಲೆ ಹಾಗೂ ಅಪರಂಜಿ 10 ಗ್ರಾಂಗೆ 120 ರು ಇಳಿಕೆಯಾಗಿ ರು 48,440 ರು ನಷ್ಟಿದೆ. ಭಾರತದ ಪ್ರಮುಖ ನಗರಗಳಲ್ಲಿ ಬೆಳ್ಳಿ ದರ ಏರಿಕೆಯಾಗಿ 1. ಕೆ.ಜಿಗೆ: ಚೆನ್ನೈ, ಹೈದರಾಬಾದ್‌ನಲ್ಲಿ 69,600ರು, ಮುಂಬೈ, ದೆಹಲಿ, ಬೆಂಗಳೂರು ಪ್ರತಿ 1 ಕೆ.ಜಿಗೆ 65,000ರು ನಷ್ಟಿದೆ. ಉಳಿದ ನಗರಗಳ ಧಾರಣೆ ವಿವರ ಮುಂದಿದೆ.

ಪ್ರತಿ ದಿನ ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?: ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.
ಚೆನ್ನೈ, ದೆಹಲಿ, ಮುಂಬೈ, ಕೋಲ್ಕತಾ, ಹೈದರಾಬಾದ್, ಪುಣೆ, ಬರೋಡಾ, ಅಹಮದಾಬಾದ್, ಜೈಪುರ, ಲಕ್ನೋ, ಕೊಯಮತ್ತೂರು, ಮಧುರೈ, ವಿಜಯವಾಡ, ಪಾಟ್ನಾ, ನಾಗಪುರ, ಚಂಡೀಗಢ, ನಾಸಿಕ್, ಭುವನೇಶ್ವರ ಮುಂತಾದ ನಗರಗಳಲ್ಲಿ ಸೆಪ್ಟೆಂಬರ್ 7ರಂದು 22 ಹಾಗೂ 24 ಕ್ಯಾರೆಟ್ ಚಿನ್ನದ ದರ ಹೀಗಿದೆ. ಚಿತ್ರ ವಿನ್ಯಾಸ: ಭರತ್ ಎಚ್.ಸಿ.
-
Gold Price Update: ಆಭರಣಪ್ರಿಯರೇ ಗಮನಿಸಿ, ಅಕ್ಷಯ ತೃತೀಯ ಮುನ್ನವೇ ಗಗನಕ್ಕೇರಿದ ಚಿನ್ನದ ದರ -
Gold: ಹಟ್ಟಿ ಚಿನ್ನದ ಗಣಿ ಐತಿಹಾಸಿಕ ಸಾಧನೆ, ದಾಖಲೆ ಮಟ್ಟದ ಚಿನ್ನ ಉತ್ಪಾದನೆ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ? ಇಲ್ಲಿದೆ ಏಪ್ರಿಲ್ 13ರ ದರಪಟ್ಟಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications